ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವನಿತಾ ಉದ್ಯಾನದಲ್ಲಿ ಸಂಗೀತ ಸಂಭ್ರಮ

Last Updated 7 ನವೆಂಬರ್ 2022, 7:01 IST
ಅಕ್ಷರ ಗಾತ್ರ

ಮಂಗಳೂರು: ಪಾಲಿಕೆಯ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಅವುಗಳಲ್ಲಿ ನಿರಂತರ ಚಟುವಟಿಕೆ ಹಮ್ಮಿಕೊಳ್ಳಲು ಕ್ರಮಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ತಿಳಿಸಿದರು.

ಕಲಾ ಸಾಧನಾ ಸಂಗೀತ ಶಾಲೆ, ಮಂಗಳೂರು ನಾರ್ತ್ ಇನ್ನರ್ ವ್ಹೀಲ್ ಕ್ಲಬ್ ಮತ್ತು ದೇವಿಕಾ ಯೋಗ ತರಗತಿಗಳ ಸಹಯೋಗದಲ್ಲಿ ನಗರದ ಹ್ಯಾಟ್ ಹಿಲ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ‘ಸಂಗೀತ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ‘ಸಂಗೀತ ನಮ್ಮಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಿಸುವ ಸಾಮರ್ಥ್ಯವನ್ನು ಹೊಂದಿದೆ’ ಎಂದರು.

ರೆಡ್‌ ಕ್ರಾಸ್‌ ಸಂಸ್ಥೆಯ ಪ್ರಭಾಕರ ಶರ್ಮ, ಮಂಗಳೂರು ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಚಂದ್ರಶೇಖರಯ್ಯ, ಕಾರ್ಪೋರೇಷನ್ ಬ್ಯಾಂಕಿನ ನಿವೃತ್ತ ಅಧಿಕಾರಿಗಳಾದ ಪಾಂಡು ರಂಗ ಆಚಾರ್ಯ, ಗಣೇಶ್ ಶೆಣೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಇನ್ನರ್ ವೀಲ್ ಮಂಗಳೂರು ನಾರ್ತ್ ಅಧ್ಯಕ್ಷೆ ವಸಂತಿ ಕಾಮತ್, ಗೀತಾ ರೈ, ಜಿಲ್ಲಾ ರೆಡ್ ಕ್ರಾಸ್ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ಸದಸ್ಯ ರವೀಂದ್ರ ನಾಥ ಉಚ್ಚಿಲ್, ಯೋಗ ಶಿಕ್ಷಕಿ ದೇವಿಕಾ ಪುರುಷೋತ್ತಮ ಇದ್ದರು. ಭಾಸ್ಕರ್ ರೈ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್ ವಂದಿಸಿದರು.
ವಿಭಾ ಎಸ್‌ ನಾಯಕ್‌ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಬಲಾದಲ್ಲಿ ಅಶ್ವಿತ್ ಹಾಗೂ ಹಾರ್ಮೂನಿಯಂನಲ್ಲಿಅತ್ರಯ್ ಸಹಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT