ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Published 12 ಜುಲೈ 2023, 12:20 IST
Last Updated 12 ಜುಲೈ 2023, 12:20 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು. ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT