ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ -ನಳಿನ್ ಕುಮಾರ್ ಕಟೀಲ್

Last Updated 14 ಏಪ್ರಿಲ್ 2022, 10:00 IST
ಅಕ್ಷರ ಗಾತ್ರ

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ. ಸಚಿವ ಈಶ್ವರಪ್ಪ ಕೂಡ ತನಿಖೆಗೆ ಒತ್ತಾಯಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಪಕ್ಷ ಮತ್ತು ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲರದು ವಾಟ್ಸ್ಆ್ಯಪ್ ಸಂದೇಶ ಇದೆಯೇ ಹೊರತು, ಡೆತ್ ನೋಟ್ ಅಲ್ಲ. ಈ ಎಲ್ಲ ಸಂಗತಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದಿನ ಎಲ್ಲ ವಿಚಾರಗಳ ತನಿಖೆ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಗೆ 2-3 ದಿನಗಳು ಬೇಕಾಗಬಹುದು. ನಂತರ ಸತ್ಯಾಸತ್ಯತೆ ತಿಳಿದು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT