ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರಸ್ವತಿ ಪೂಜೆಗೆ ಮುನ್ನ ಪುಸ್ತಕ’

ಕಲ್ಲಡ್ಕ: 'ಶ್ರೀರಾಮ ಸೆಕೆಂಡರಿ ಸ್ಕೂಲ್' ಉದ್ಘಾಟನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Last Updated 3 ಜುಲೈ 2022, 2:38 IST
ಅಕ್ಷರ ಗಾತ್ರ

ಬಂಟ್ವಾಳ: ಮುಂದಿನ ಸರಸ್ವತಿ ಪೂಜೆಗೆ ಮೊದಲು ಹೊಸ ಶಿಕ್ಷಣ ನೀತಿ ಪುಸ್ತಕ ಸಿಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಇಲ್ಲಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ‘ಶ್ರೀರಾಮ ಸೆಕೆಂಡರಿ ಸ್ಕೂಲ್’ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸ್ವಾಭಿಮಾನದ ಜೀವನ ನೀಡುವ ಹೊಸ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಆದ್ಯತೆ ನೀಡಿದ್ದಾರೆ. ದೇಶೀಯ ಸಂಸ್ಕೃತಿ, ಸ್ವಾಭಿಮಾನ ತುಂಬುವ ಗುರುಕುಲ ಶಿಕ್ಷಣ ಅಗತ್ಯವಿದೆ ಎಂದರು.

ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಮಾತನಾಡಿ, ಉದ್ಯೋಗಕ್ಕೆ ಸೀಮಿತವಾಗಿದ್ದ ಶಿಕ್ಷಣ ನೀತಿಗಿಂತ ಮೋದಿ ಅವರ ಕನಸಿನಂತೆ ಕೌಶಲ ವೃದ್ಧಿಸುವ ಹೊಸ ಶಿಕ್ಷಣ ನೀತಿ ಅರ್ಥಪೂರ್ಣವಾಗಿದೆ’ ಎಂದರು.

ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ. ಪ್ರಭಾಕರ ಭಟ್ ಪ್ರಾಸ್ತಾವಿಕ ಮಾತನಾಡಿದರು. ತಹಶೀಲ್ದಾರ್ ಡಾ. ಸ್ಮಿತಾ ರಾಮು, ಉದ್ಯಮಿ ಉದಯಕುಮಾರ್ ಶೆಟ್ಟಿ ಮುನಿಯಾಲು, ವಿದ್ಯಾಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್., ಡಾ. ಕಮಲಾ ಪ್ರಭಾಕರ ಭಟ್, ಬಿಜೆಪಿ ಜಿಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ., ಡಿಡಿಪಿಐ ಸುಧಾಕರ್, ಬಿಇಒ ಜ್ಞಾನೇಶ್ ಎಂ.ಪಿ. ಇದ್ದರು.

ಭಗವದ್ಗೀತೆ ಕಂಠಪಾಠ ಮಾಡಿದ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅವರನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲ ತಿರುಮಲೇಶ್ವರ ಪ್ರಶಾಂತ್ ಸ್ವಾಗತಿಸಿ, ಶಿಕ್ಷಕಿ ಶ್ವೇತಾ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT