ಸಸಿಹಿತ್ಲು ಬೀಚ್: ಒಬ್ಬನ ಸಾವು, ಒಬ್ಬರು ನೀರು ಪಾಲು

ಮೂಲ್ಕಿ: ಇಲ್ಲಿನ ಸಸಿಹಿತ್ಲು ಮುಂಡ ಬೀಚ್ಗೆ ಪ್ರವಾಸಕ್ಕೆ ಬಂದಿದ್ದ 11 ಮಂದಿ ತಂಡದಲ್ಲಿ, 9 ಮಂದಿ ನೀರಿಗೆ ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ನೀರು ಪಾಲಾಗಿದ್ದು, 7 ಮಂದಿ ರಕ್ಷಣೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಾಣೂರಿನ ಸುಂದರ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಬಳಿಯ ತೋಕೂರಿನ ಮೂಡುಮನೆಗೆ ಶುಕ್ರವಾರ ಮದುವೆ ಕಾರ್ಯಕ್ಕೆ ಬಂದಿದ್ದ 11 ಮಂದಿ, ಭಾನುವಾರ ಸಸಿಹಿತ್ಲು ಬೀಚ್ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
9 ಮಂದಿ ಮಾತ್ರ ನೀರಿಗೆ ಇಳಿದಿದ್ದರು. ಈ ವೇಳೆ ಮಹಿಳೆ ನೀರಿನ ಸೆಳೆತಕ್ಕೆ ಒಳಗಾಗಿದ್ದು, ಮುಳುಗುತ್ತಿದ್ದ ಅವರ ರಕ್ಷಣೆಗೆ ಮುಂದಾಗಿದ್ದ ಸುಂದರ ಶೆಟ್ಟಿ ಹಾಗೂ ಇನ್ನಿತರರು ಕೂಡ ನೀರಿನ ಸೆಳೆತಕ್ಕೆ ಸಿಕ್ಕು ಹಾಕಿಕೊಂಡರು. ಈ ವೇಳೆ ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯ ಮಾಡಿದ್ದಾರೆ. ಅಷ್ಟರಲ್ಲಿಯೇ ಸುಂದರ ಶೆಟ್ಟಿ ಅವರು ನೀರಿ ಸೆಳೆತಕ್ಕೆ ಸಿಕ್ಕು ಹಾಕಿಕೊಂಡು ಸಾವನ್ನಪ್ಪಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ನೀರು ಪಾಲಾಗಿದ್ದ ವ್ಯಕ್ತಿಯನ್ನು ದಾಮೋದರ ಶೆಟ್ಟಿ ಎಂದು ಗುರುತಿಸಲಾಗಿದ್ದು, ಪತ್ತೆ ಕಾರ್ಯ ನಡೆದಿದೆ. 7 ಮಂದಿ ಕೂಡ ಚಿಕಿತ್ಸೆಗಾಗಿ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.