ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಟ್ಟಾರಣ್ಯದಲ್ಲಿ ಸ್ಯಾಟಲೈಟ್ ಫೋನ್ ಕರೆ: ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು

Last Updated 17 ಸೆಪ್ಟೆಂಬರ್ 2021, 1:54 IST
ಅಕ್ಷರ ಗಾತ್ರ

ಮಂಗಳೂರು: ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ನಿಷೇಧ ಸ್ಯಾಟಲೈಟ್ ಫೋನ್ ಕರೆ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಗುರುವಾರ ಶಂಕಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸದ್ದಾಗಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ರವಾನೆಯಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT