ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಯಂಪ್ರೇರಣೆಯಿಂದ ಜೀವಜಲ ಉಳಿಸಿ: ಪ್ರಭಾಕರ ಶರ್ಮ

Published 19 ಮೇ 2024, 6:03 IST
Last Updated 19 ಮೇ 2024, 6:03 IST
ಅಕ್ಷರ ಗಾತ್ರ

ಮಂಗಳೂರು: ‘ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ನೀರನ್ನು ಮಿತ ಬಳಕೆ ಮಾಡಬೇಕು. ತಮ್ಮ ಇತಿಮಿತಿಯೊಳಗೂ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು’ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮ ಹೇಳಿದರು.

ಜೀವ -ಜಲ ಉಳಿಸಿ ಅಭಿಯಾನದ ಅಂಗವಾಗಿ ನಗರದ ಲಾಲ್‌ಬಾಗ್ ವನಿತಾ ಉದ್ಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಬ್ಯಾಂಕ್ ಆಫ್ ಬರೋಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಗರದಲ್ಲಿ ಕಾಂಕ್ರೀಟ್ ಕಟ್ಟಡ ನಿರ್ಮಾಣವೂ ಸೇರಿದಂತೆ ವಿವಿಧ ಕಾಮಗಾರಿಗಳಿಂದಾಗಿ ಪರಿಸರದ ಮೇಲೆ ವ್ಯಾಪಕ ಆಕ್ರಮಣ ನಡೆಯುತ್ತಿದೆ’ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಜಯರಾಮ್, ‘ಸಕಲ ಜೀವರಾಶಿಗಳಿಗೆ ಆಧಾರವಾದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳ ಜೀವ ರಕ್ಷಣೆಯ ಬಗ್ಗೆಯೂ ನಾವು ಯೋಚಿಸಬೇಕು. ನೀರನ್ನು ಮಿತವಾಗಿ ಬಳಸುವಂತೆ ಜನ ಜಾಗೃತಿ ಮೂಡಿಸಬೇಕು’ ಎಂದರು. 

ಬ್ಯಾಂಕ್ ಆಫ್ ಬರೋಡದ ಮಂಗಳೂರು ವಿಭಾಗದ ಹಿರಿಯ ವ್ಯವಸ್ಥಾಪಕ ಎಡ್ರಿಚ್ ಡಿಸೋಜ, ಮುಖ್ಯ ವ್ಯವಸ್ಥಾಪಕ ಸತೀಶ್ ಪಾಟ್ಕರ್, ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದೇವಿಕಾ ಯೋಗ ತರಬೇತಿ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ, ಇನ್ನರ್ ವ್ಹೀಲ್ ಕ್ಲಬ್‌ನ ಮಂಗಳೂರು ಉತ್ತರ ಘಟಕದ ಅಧ್ಯಕ್ಷೆ ಗೀತಾ ಬಿ.ರೈ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಪುಷ್ಪರಾಜ್ ಬಿ.ಎನ್. ವಂದಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT