ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯ ಉಳಿತಾಯ ಖಾತೆ ತೆರೆಯುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಕಟೀಲು ದೇಗುಲದ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಉಳಿತಾಯ ಖಾತೆ ತೆರೆದವರಿಗೆ ಪಾಸ್ ಪುಸ್ತಕ ವಿತರಿಸಿದರು. ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ, ಹಣ ಉಳಿತಾಯ ಮಾಡುವ ಮೂಲಕ ಮುಂದಿನ ಶಿಕ್ಷಣಕ್ಕೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.
ಉಪ ಅಂಚೆ ಅಧೀಕ್ಷಕ ದಿನೇಶ್, ಉಳಿತಾಯ ಖಾತೆ ತೆರೆದು ಸದುಪಯೋಗ ಪಡಿಸಿಕೊಂಡ ಪ್ರೌಢಶಾಲೆಯ ಚಿಂತನ್ ಹಾಗೂ ಪ್ರಜ್ವಲ್ ಅವರನ್ನು ಅಭಿನಂದಿಸಿದರು. ಮಾರುಕಟ್ಟೆ ಅಧಿಕಾರಿ ಸುಭಾಸ್, ಉಪನ್ಯಾಸಕ ವಾದಿರಾಜ್ ಮಾತನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕುಸುಮಾವತಿ, ಉಪಪ್ರಾಂಶುಪಾಲ ರಾಜಶೇಖರ್, ಮುಖ್ಯ ಶಿಕ್ಷಕ ಚಂದ್ರಶೇಖರ್, ಉಪನ್ಯಾಸಕಿ ಶೈಲಜಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.