ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಕ್ಷೇತ್ರದಲ್ಲಿ ಎಸ್‌ಸಿಡಿಸಿಸಿ ಸೇವೆ ಮಾದರಿ

ಬ್ಯಾಂಕ್‌ ನಿರ್ದೇಶಕರ ಜೊತೆ ಸಚಿವ ನಿರಾಣಿ ಸಮಾಲೋಚನೆ
Last Updated 12 ಮೇ 2022, 15:59 IST
ಅಕ್ಷರ ಗಾತ್ರ

ಮಂಗಳೂರು: ಉತ್ತಮ ಗ್ರಾಹಕ ಸೇವೆ ನೀಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಕರಣೀಯ ಸಾಧನೆ ಮಾಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಮಾನವಾಗಿ ಬೆಳೆದಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ಗುರುವಾರ ನಗರದ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ, ಬ್ಯಾಂಕಿನ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು.

‘ಎಸ್‌ಸಿಡಿಸಿಸಿ ಬ್ಯಾಂಕ್ ಉದ್ದಿಮೆದಾರರಿಗೆ ಸಾಲ ಸೌಲಭ್ಯ ನೀಡಿದೆ. ನನ್ನ ನಿರಾಣಿ ಗ್ರೂಪ್‌ಗೆ 25 ವರ್ಷಗಳ ಹಿಂದೆ ರಾಜೇಂದ್ರ ಕುಮಾರ್ ಅವರು ಸಾಲ ನೀಡಿದ್ದು, ಅದರಿಂದ ನನ್ನ ಉದ್ದಿಮೆ ಇಂದು ಯಶಸ್ವಿಯಾಗಿ ಬೆಳೆದು ನಿಂತಿದೆ. ಸಹಸ್ರಾರು ಮಂದಿ ಉದ್ಯೋಗ ಅವಕಾಶ ಸಿಕ್ಕಿದೆ. ನನ್ನ ಸಂಸ್ಥೆ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆಯಲು ರಾಜೇಂದ್ರ ಕುಮಾರ್ ಅವರ ಪ್ರೋತ್ಸಾಹವೇ ಕಾರಣ’ ಎಂದರು.

ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡಿ, ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುತ್ತಿರುವ ರಾಜೇಂದ್ರಕುಮಾರ್ ಕಾರ್ಯ ಶ್ಲಾಘನೀಯ. ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಸಚಿವ ಮುರುಗೇಶ್ ನಿರಾಣಿ ಅವರನ್ನು ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಬೆಳ್ಳಿಯ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್.ಕೋಟ್ಯಾನ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಮಹಾಪ್ರಬಂಧಕರಾದ ಗೋಪಿನಾಥ್ ಭಟ್, ಮೇಘರಾಜ್ ಜೈನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT