ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಕಿಜೊಫ್ರೇನಿಯಾ ಬಗ್ಗೆ ಆತಂಕ ಬೇಡ: ಡಾ. ಎಚ್.ಆರ್ ತಿಮ್ಮಯ್ಯ

Published 31 ಮೇ 2024, 6:26 IST
Last Updated 31 ಮೇ 2024, 6:26 IST
ಅಕ್ಷರ ಗಾತ್ರ

ಮಂಗಳೂರು: ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಆತಂಕ ಬೇಡ. ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರಿಂದ ಸಹಜ ಜೀವನ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಹೇಳಿದರು.

ಕುಂಟಿಕಾನದಲ್ಲಿರುವ ಎ.ಜೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಸ್ಕಿಜೊಫ್ರೇನಿಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ದಯಾಳುತನದ ಶಕ್ತಿಯ ಆಚರಣೆ ಈ ವರ್ಷದ ಧ್ಯೇಯವಾಕ್ಯವಾಗಿದ್ದು, ಅದರಂತೆ ಮಾನಸಿಕ ಅಸ್ವಸ್ಥರನ್ನು ಮೊದಲ ಹಂತದಲ್ಲಿ ಗುರುತಿಸಲಾಗುತ್ತದೆ. ಅವರನ್ನು ಕಡೆಗಣಿಸಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಡೀನ್ ಡಾ. ಅಶೋಕ್ ಹೆಗ್ಡೆ ಮಾತನಾಡಿ, ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕ ಹಾಗೂ ನೈತಿಕವಾಗಿ ಸದೃಢವಾಗಿದ್ದಲ್ಲಿ ಮಾತ್ರ ಆರೋಗ್ಯವಂತ ಎಂದು ಗುರುತಿಸಲಾಗುತ್ತದೆ. ವ್ಯಕ್ತಿ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೂ ಸಮಾಜ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಗುರುತ್ತಿಸುತ್ತದೆ. ಈ ಹಿನ್ನಲೆಯಲ್ಲಿ ಮಾನಸಿಕ ರೋಗ್ಯದ ಕಡೆಗೆ ಹೆಚ್ಚಿನ ಕಾಳಜಿವಹಿಸಿ, ಆರೋಗ್ಯವಂತ ಸಮಾಜದ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮನೋರೋಗ ವಿಭಾಗದ ಡಾ. ಅರುಣಾ ಯಡಿಯಾಳ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಿರುಚಿತ್ರ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು

ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕಿ ಡಾ. ಜೆಸಿಂತಾ, ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷ ಡಾ.ದುರ್ಗಪ್ರಸಾದ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿ ಡಾ.ಸುದರ್ಶನ್, ಜಿಲ್ಲಾ ರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT