ಶಾಲಾ, ಕಾಲೇಜುಗಳಿಗೆ ರಜೆ

7
ಕರಾವಳಿಯಲ್ಲಿ ಮತ್ತೆ ಬಿರುಸಾದ ಮಳೆ

ಶಾಲಾ, ಕಾಲೇಜುಗಳಿಗೆ ರಜೆ

Published:
Updated:

ಮಂಗಳೂರು: ಕರಾವಳಿಯಲ್ಲಿ ಭಾನುವಾರ ಅರ್ಧ ದಿನ ಬಿಡುವು ಕೊಟ್ಟಿದ್ದ ಮಳೆ ಭಾನುವಾರ ಸಂಜೆಯಿಂದ ಮತ್ತೆ ಬಿರುಸಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಎಲ್ಲ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾನುವಾರ ಮಧ್ಯಾಹ್ನ ಬಳಿಕ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆ ಜೋರಾಯಿತು. ಸೋಮವಾರ ಕೂಡ ಎರಡೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದರು.

ಎರಡೂ ಜಿಲ್ಲೆಗಳ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದೆ. ನದಿ ನೀರಿನ ಮಟ್ಟದ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದು, ಪ್ರಮುಖ ದೇವಾಲಯಗಳ ಸ್ನಾನಘಟ್ಟಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮುಳುಗಿದ ದೋಣಿಗಳು:

ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯ ಸಮುದ್ರದಲ್ಲಿ ಶನಿವಾರ ರಾತ್ರಿ ಎರಡು ದೋಣಿಗಳು ಮುಳುಗಿವೆ. ಈ ದೋಣಿಗಳಲ್ಲಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !