ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ರಾಜ್ಯಪಾಲರಿಂದ ಕಟ್ಟಡ ಲೋಕಾರ್ಪಣೆ

ದಡ್ಡಲಕಾಡು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ; ₹1ಕೋಟಿ ವೆಚ್ಚ
Last Updated 4 ಜನವರಿ 2019, 15:34 IST
ಅಕ್ಷರ ಗಾತ್ರ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಇದರ ದತ್ತು ಯೋಜನೆಯಡಿ ನಿರ್ಮಾಣಗೊಂಡ ₹1 ಕೋಟಿ ವೆಚ್ಚದ ದಡ್ಡಲಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡ ಇದೇ 5ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯಪಾಲ ವಜುಭಾಯ್‌ ವಾಲಾ ಉದ್ಘಾಟಿಸುವರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್, ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಸಂಸದ ನಳಿನ್ ಕುಮಾರ್ ಕಟೀಲು, ಹೈಕೋರ್ಟ್‌ ವಕೀಲ ಎಸ್.ರಾಜಶೇಖರ್ ಭಾಗವಹಿಸುವರು.

ಮೆರವಣಿಗೆ: ₹1ಕೋಟಿ ವೆಚ್ಚದ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ಪ್ರಯುಕ್ತ ಶುಕ್ರವಾರ ಅದ್ಧೂರಿ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಇಲ್ಲಿನ ಮಣಿಹಳ್ಳ ಜಂಕ್ಷನ್ ಬಳಿ ಬೆಳಿಗ್ಗೆ ಕೇಲ್ದೋಡಿಗುತ್ತು ಕೋಟಿ ಪೂಜಾರಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಕ್ಲಬ್ಬಿನ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ, ಮುಖ್ಯಶಿಕ್ಷಕ ಮೌರಿಸ್ ಡಿಸೋಜ, ಸಹಶಿಕ್ಷಕಿ ಹಿಲ್ಡಾ ಫರ್ನಾಂಡಿಸ್, ಅರ್ಚಕ ಗುರುರಾಜ್ ಭಟ್, ಪ್ರಮುಖರಾದ ಜಿ.ಆನಂದ, ಪೂವಪ್ಪ ಮೆಂಡನ್, ಪುರುಷೋತ್ತಮ ಅಂಚನ್, ನವೀನ್ ಸೇಸಗುರಿ, ವಿನೋದ್ ಕರೆಂಕಿ, ವಿಠಲ ಡಿ., ವಸಂತಗೌಡ ಹಳೆಗೇಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT