7
ಭಾರಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ: ಶಾಲೆ–ಕಾಲೇಜಿಗೆ ಸೋಮವಾರ ರಜೆ

Published:
Updated:

ಮಂಗಳೂರು: ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ಆದರೆ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪೂರ್ವನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !