ಬುಧವಾರ, ಮಾರ್ಚ್ 29, 2023
30 °C
ಕಾಸರಗೋಡು ಜಿಲ್ಲೆಯಲ್ಲಿ ಶಾಲೆ ಆರಂಭ

2 ಬ್ಯಾಚ್‌ನಲ್ಲಿ ತರಗತಿ: ಕಾಸರಗೋಡು ಜಿಲ್ಲೆಯಲ್ಲಿ ಶಾಲೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೋವಿಡ್–19 ನಿಂದಾಗಿ ಕಾಸರಗೋಡು ಜಿಲ್ಲೆಯಲ್ಲಿ ಮುಚ್ಚಿದ್ದ ಶಾಲೆಗಳು ಒಂದೂವರೆ ವರ್ಷಗಳ ಬಳಿಕ ಸೋಮವಾರದಿಂದ ಆರಂಭವಾಗಿವೆ. ಕೋವಿಡ್ ಮಾರ್ಗಸೂಚಿಯಂತೆ ಶಾಲೆಗಳು ಪುನರಾರಂಭಗೊಂಡಿವೆ.

18 ತಿಂಗಳ ಬಳಿಕ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳನ್ನು ಶಾಲಾ ಆಡಳಿತ ಸಮಿತಿ, ಶಿಕ್ಷಕರು ಹಾಗೂ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಸ್ವಾಗತಿಸಲಾಯಿತು.

ನ.1ರಿಂದ ಒಂದರಿಂದ 7 ಮತ್ತು 10ನೇ ತರಗತಿ ಆರಂಭವಾಗಿದ್ದು, 8 ಮತ್ತು 9ನೇ ತರಗತಿಗಳು ನ. 15 ರಿಂದ ಶುರುವಾಗಲಿವೆ. ಮೊದಲ 15 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ತರಗತಿ ನಡೆಯಲಿವೆ. ಒಂದು ತರಗತಿಯಲ್ಲಿ ಶೇ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲಾ ಮಕ್ಕಳನ್ನು ಕರೆದುಕೊಂಡು ಬರುವ ವಾಹನ ಚಾಲಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಮಾಸ್ಕ್‌, ಸ್ಯಾನಿಟೈಸರ್‌, ಸುರಕ್ಷಿತ ಅಂತರ ಪಾಲನೆ ಸೇರಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು