ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ವಿರೋಧಿ ಶಕ್ತಿಯ ಸೋಲಿಸಲು ಪಣ

ಎಸ್‌ಡಿಪಿಐ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ
Published 18 ಏಪ್ರಿಲ್ 2024, 5:49 IST
Last Updated 18 ಏಪ್ರಿಲ್ 2024, 5:49 IST
ಅಕ್ಷರ ಗಾತ್ರ

ಮಂಗಳೂರು: ‘ಸಂವಿಧಾನ ವಿರೋಧಿ ಶಕ್ತಿಗಳನ್ನು ಸೋಲಿಸಲು ಪಕ್ಷವು ನಿರ್ಣಾಯಕ ಪಾತ್ರ ವಹಿಸಬೇಕು. ಇದಕ್ಕಾಗಿ ಗರಿಷ್ಠ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು’ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬುಧವಾರ ನಿರ್ಣಯ ಕೈಗೊಳ್ಳಲಾಗಿದೆ.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡ್‌ನಲ್ಲಿ ನಡೆದ ಸಭೆಯಲ್ಲಿ, ‘ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಸ್ಪರ್ಧೆ ಮಾಡಿಲ್ಲ. ಆದರೆ ಮತದಾನದ ಮಹತ್ವದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ  ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಸಮಾವೇಶಗಳನ್ನು ನಡೆಸಿ ಪಕ್ಷದ ಕಾರ್ಯಕರ್ತರಿಗೆ ಈ ವಿಚಾರದಲ್ಲಿ ಮನವರಿಕೆ ಮಾಡಕೊಡಬೇಕು‘ ಎಂದು ತೀರ್ಮಾನ ಕೈಗೊಳ್ಳಲಾಗಿದೆ. 

ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡೂರ್, ಜಮಾಲ್ ಜೋಕಟ್ಟೆ, ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಖಜಾಂಚಿ ಮೂಸಬ್ಬ ತುಂಬೆ, ವಿಮೆನ್ ಇಂಡಿಯಾ ಮೂಮೆಂಟ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿ ಬಶೀರ್‌ ಬೊಳ್ಳಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT