ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಜಯಂತಿ ಆಚರಿಸುವ ನೈತಿಕ ಹಕ್ಕು ಸರ್ಕಾರಕ್ಕೆ ಇಲ್ಲ: ಎಸ್‌.ಡಿ.ಪಿ.ಐ

Published 2 ಅಕ್ಟೋಬರ್ 2023, 13:05 IST
Last Updated 2 ಅಕ್ಟೋಬರ್ 2023, 13:05 IST
ಅಕ್ಷರ ಗಾತ್ರ

ಪುತ್ತೂರು: ರಾಜ್ಯ ಸರ್ಕಾರ 1 ಸಾವಿರ ಮದ್ಯಂಗಡಿ ತೆರೆಯುವ ಮೂಲಕ ಗಾಂಧಿ ತತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಮದ್ಯದಂಗಡಿ ಹೆಚ್ಚಿಸಿ ಗಾಂಧಿ ಜಯಂತಿ ಆಚರಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯು ಇಲ್ಲಿನ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿತು.

ವುಮೆನ್ಸ್ ಇಂಡಿಯಾ ಮೂವ್‌ಮೆಂಟ್‌ ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ ಮಾತನಾಡಿ, ರಾಜ್ಯ ಸರ್ಕಾರವು ಗ್ಯಾರಂಟಿಗೆ ಹಣ ಸರಿದೂಗಿಸಲು ಮದ್ಯದಂಗಡಿ ಹೆಚ್ಚಿಸಿ ಮದ್ಯಪಾನವನ್ನು ಪ್ರೋತ್ಸಾಹಿಸುತ್ತಿದೆ. ಈ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ನೈತಿಕ ಹಕ್ಕಿಲ್ಲ. ಹೆಚ್ಚುವರಿ ಮದ್ಯದಂಗಡಿ ತೆರೆಯುವುದನ್ನು ಬಿಟ್ಟು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್, ಪ್ರಧಾನ ಕಾರ್ಯದರ್ಶಿ ರಹೀಮ್ ಪುತ್ತೂರು, ವುಮೆನ್ಸ್ ಇಂಡಿಯಾ ಮೂಮೆಂಟ್ ಪುತ್ತೂರು ಘಟಕದ ಅಧ್ಯಕ್ಷೆ ಜಾಯಿದಾ ಸಾಗರ್, ನಗರಸಭೆ ಸದಸ್ಯೆ ಫಾತಿಮತ್ ಝೋಹರಾ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯೆ ಸೌದ, ಎಸ್‌ಡಿಪಿಐ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು, ಹಿರಿಯರಾದ ಪಿಬಿಕೆ, ಉಸ್ಮಾನ್ ಎ.ಕೆ.ಸಲೀಂ ಪುರುಷರಕಟ್ಟೆ, ಅಶ್ರಫ್ ಬಡಕ್ಕೋಡಿ, ನವಾಜ್ ಕೆರೆಮೂಲೆ, ಎಸ್‌ಡಿಪಿಐ ಪುತ್ತೂರು ಘಟಕದ ಕಾರ್ಯದರ್ಶಿ ಇಫಾಜ್ ಬನ್ನೂರು, ರಿಯಾಝ್ ಬಳಕ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT