ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಯ: ಫ್ಲೆಕ್ಸ್‌ನಲ್ಲಿ ಗರ್ಭಿಣಿಯ ಚಿತ್ರ ಬಳಕೆ–ಬಜರಂಗ ದಳ ಗದ್ದಲ

Last Updated 28 ಸೆಪ್ಟೆಂಬರ್ 2022, 10:49 IST
ಅಕ್ಷರ ಗಾತ್ರ

ಉಳ್ಳಾಲ: ಸೀಮಂತ ಕಾರ್ಯಕ್ರಮದ ಸಲುವಾಗಿ ಅಳವಡಿಸಿದ್ದ ಫ್ಲೆಕ್ಸ್‌ನಲ್ಲಿ ಗರ್ಭಿಣಿಯೊಬ್ಬರ ಭಾವಚಿತ್ರ ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಬಜರಂಗದಳದ ಕಾರ್ಯಕರ್ತರು ಕೊಲ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿ ಬುಧವಾರ ಗದ್ದಲ ನಡೆಸಿದರು.

ಪೋಷಣ್ ಮಾಸಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಮಂಗಳೂರು ಗ್ರಾಮಾಂತರ ಘಟಕದ ವತಿಯಿಂದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲ್ಲೂಕು ಮಟ್ಟದಈ ಕಾರ್ಯಕ್ರಮದ ಪ್ರಚಾರಕ್ಕಾಗಿ ಸಭಾಂಗಣದ ಮುಂದೆ ಅಳವಡಿಸಲಾಗಿದ್ದ ಫ್ಲೆಕ್ಸ್‌ನಲ್ಲಿ ಗರ್ಭಿಣಿಯೊಬ್ಬರ ಭಾವಚಿತ್ರವನ್ನು ಬಳಸಲಾಗಿತ್ತು.ಗರ್ಭಿಣಿಯ ಅನುಮತಿ ಪಡೆಯದೆಯೇ ಅವರ ಭಾವಚಿತ್ರವನ್ನು ಫ್ಲೆಕ್ಸ್‌ನಲ್ಲಿ ಬಳಸಲಾಗಿದೆ ಎಂದು ಬಜರಂಗದಳದ ಆರೋಪಿಸಿದ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯೊಬ್ಬರು ಭಾಷಣಮಾಡುತ್ತಿದ್ದಾಗ ಸಭಾಂಗಣದ ಒಳಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಆಯೋಜಕರ ವಿರುದ್ಧ ಹಾಗೂ ಕ್ಷೇತ್ರದ ಶಾಸಕ ಯು.ಟಿ.ಖಾದರ್ ವಿರುದ್ಧ ಘೋಷಣೆ ಕೂಗಿದರು.
ಕಾರ್ಯಕ್ರಮದ ಆಯೋಜಕರು ಫ್ಲೆಕ್ಸ್ ಅನ್ನು ತೆರವುಗೊಳಿಸಿ, ಕಾರ್ಯಕರ್ತರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT