ಬುಧವಾರ, ಏಪ್ರಿಲ್ 14, 2021
24 °C
ಸಿಐಡಿಯಿಂದ ಡಿಜಿಪಿಗೆ ತನಿಖಾ ವರದಿ ಸಲ್ಲಿಕೆ

ಎಲಿಯ ಕನ್‌ಸ್ಟ್ರಕ್ಷನ್‌ ಕಂಪನಿ ಅವ್ಯವಹಾರ ಪ್ರಕರಣ: ಪೊಲೀಸರಿಂದಲೇ ಕಾರು ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಎಲಿಯ ಕನ್‌ಸ್ಟ್ರಕ್ಷನ್‌ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.

₹30 ಕೋಟಿ ವಂಚನೆ ಸಂಬಂಧ ಎಲಿಯ ಕನ್‌ಸ್ಟ್ರಕ್ಷನ್ ಆಂಡ್‌ ಬಿಲ್ಡರ್ಸ್‌ ಕಂಪನಿಯ ಜಾಗ್ವಾರ್‌, ಪೋರ್ಷೆ ಹಾಗೂ ಬಿಎಂಡಬ್ಲ್ಯು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಪೈಕಿ ಎರಡು ಕಾರುಗಳನ್ನು ಸ್ವಂತಕ್ಕೆ ಬಳಸಿಕೊಂಡಿದ್ದ ಸಿಸಿಬಿ ಪೊಲೀಸರು, ಆರೋಪಿಯೊಬ್ಬನ ಮೂಲಕವೇ ಜಾಗ್ವಾರ್‌ ಕಾರು ಮಾರಾಟ ಮಾಡಿಸಿದ್ದರು.

ಈ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿ ಪ್ರವೀಣ್‌ ಸೂದ್‌ ಅವರು ಸಿಐಡಿಗೆ ಸೂಚಿಸಿದ್ದರು. ಅದರಂತೆ ಸಿಐಡಿ ಅಧಿಕಾರಿಗಳು ವರದಿ ನೀಡುವಂತೆ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್‌ ಅವರಿಗೆ ಸೂಚನೆ ನೀಡಿದ್ದರು. ಈ ಕುರಿತು ಡಿಸಿಪಿ ವಿನಯ್‌ ಗಾಂವ್ಕರ್‌ ಅವರ ವರದಿಯನ್ನು ಆಧರಿಸಿ, ಸಿಐಡಿಯಿಂದ ಡಿಜಿಪಿಗೆ ತನಿಖಾ ವರದಿ ಸಲ್ಲಿಕೆಯಾಗಿದೆ.

ಎರಡು ಕಾರುಗಳನ್ನು ಪೊಲೀಸರು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು, ಜಾಗ್ವಾರ್‌ ಕಾರನ್ನು ಪ್ರಕರಣದ ಆರೋಪಿಯಿಂದಲೇ ಮಾರಾಟ ಮಾಡಿಸಿ, ಬಂದ ಹಣದಲ್ಲೂ ಅವ್ಯವಹಾರ ಮಾಡಿದ್ದರು ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು