ಶುಕ್ರವಾರ, ಅಕ್ಟೋಬರ್ 23, 2020
24 °C

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Tenkabail tirumaleshwara shastri

ಮಂಗಳೂರು: ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿಗಳು (76)  ಭಾನುವಾರ ನಿಧನರಾದರು.

ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಬಳಿ ತೆಂಕಬೈಲು ನಿವಾಸಿಯಾಗಿರುವ ಅವರು ತಮ್ಮ ಕಂಚಿನ ಕಂಠದಿಂದ ಯಕ್ಷಗಾನ ಕ್ಷೇತ್ರದಲ್ಲಿ ಪ್ರಸಿದ್ಧರಾಗಿದ್ದರು. ಸುವಿಖ್ಯಾತ ಭಾಗವತರಾಗಿದ್ದ ದಿ. ಮಾಂಬಾಡಿ ನಾರಾಯಣ ಭಾಗವತರಲ್ಲಿ ಯಕ್ಷಗಾನ ಭಾಗವತಿಕೆಯನ್ನು ಅಭ್ಯಸಿಸಿದ್ದ ಭಾಗವತರು, ಬಜಕ್ಕಳ ಗಣಪತಿ ಭಟ್ಟರಲ್ಲಿ ಶಾಸ್ತ್ರೀಯ ಸಂಗೀತದ ಅಭ್ಯಾಸವನ್ನೂ ಮಾಡಿಕೊಂಡಿದ್ದರು. ತೆಂಕಬೈಲು ಭಾಗವತರು 25 ವರ್ಷಗಳ ಕಾಲ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ, ಉಡುಪಿ ಯಕ್ಷಗಾನ ಕಲಾರಂಗ, ಸಂಪಾಜೆ ಡಾ. ಕೀಲಾರು ಗೋಪಾಲ ಕೃಷ್ಣಯ್ಯ ಪ್ರತಿಷ್ಠಾನ ಕೊಡಮಾಡುವ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳಿಗೆ ಶಾಸ್ತ್ರಿಗಳು ಭಾಜನರಾಗಿದ್ದರು.

ಭಾಗವತಿಕೆ ಮಾತ್ರವಲ್ಲದೆ ಚೆಂಡೆ, ಮದ್ದಳೆ ವಾದನದಲ್ಲೂ ಪರಿಣತಿ ಹೊಂದಿದ್ದ ಭಾಗವತರು ಅಪಾರ ಸಂಖ್ಯೆಯ ಶಿಷ್ಯಂದಿರನ್ನು ಹೊಂದಿದ್ದರು. ಸುಮಾರು 10 ವರ್ಷಗಳಿಂದ ಗಡಿನಾಡು ಕಾಸರಗೋಡಿನ ಪೆರ್ಲದಲ್ಲಿರುವ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಲ್ಲಿ ಹಿಮ್ಮೆಳ ತರಗತಿಯನ್ನೂ ನಡೆಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಇತರ ಕೆಲವು ಕಡೆಗಳಲ್ಲಿಯೂ ಹಿಮ್ಮೇಳ ತರಗತಿ ನಡೆಸುತ್ತಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು