ಮಂಗಳೂರು: ತೆಲಂಗಾಣ ಹಾಗೂ ಬೀದರನಿಂ ಅಪಾರ ಪ್ರಮಾಣದ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 44 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್, ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದೀನ್, ತೆಲಂಗಾಣದ ವಿಠಲ್ ಚೌವ್ಹಾಣ್ ಮತ್ತು ಬೀದರ್ ನ ಸಂಜೀವ್ ಕುಮಾರ್ , ಕಲ್ಲಪ್ಪ ಎಂಬವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಿದಾಗ, ಮೊಹ್ಮದ್ ಹಾಫಿಜ್, ಸಂದೀಪ್ ಎಂಬುವವರ ಶಾಮೀಲಾಗಿರುವುದು ಪತ್ತೆಯಾಗಿದೆ. ಉಳ್ಳಾಲ ಪೊಲೀಸರು ಈ ಇಬ್ಬರನ್ನೂ ಬಂಧಿಸಿದ್ದಾರೆ.

ಆರೋಪಿಗಳಿಂದ ಎರಡು ಕಾರು, 44 ಕೆ.ಜಿ. ಗಾಂಜಾ, ಏಳು ಮೊಬೈಲ್ ಸೇರಿದಂತೆ ₹23 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.