ಬುಧವಾರ, ಅಕ್ಟೋಬರ್ 20, 2021
28 °C
ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ

ಅತ್ಯಾಚಾರ ಸಂತ್ರಸ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪೊಲೀಸ್ ಪೇದೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡಬ (ಉಪ್ಪಿನಂಗಡಿ): ಹಿಂದೆ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಮೇಲೆ, ಕಡಬ ಠಾಣೆ ಪೊಲೀಸರು ಆರೋಪಿ ಶಿವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

‘ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೆ ಒಳಗಾಗಿದ್ದಳು. ಆ ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ, ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ. ಆಗ ಪರಿಚಯಸ್ಥನಾಗಿದ್ದು, ಪ್ರಕರಣ ಮುಗಿದಿದ್ದರೂ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು’ ಎಂದು ಸಂತ್ರಸ್ತೆಯ ತಂದೆ ಕಡಬ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

‘ಮಗಳನ್ನು ವಿಚಾರಿಸಿದಾಗ, ಕಡಬ ಪೊಲೀಸ್ ಸಿಬ್ಬಂದಿ ನನ್ನನ್ನು ಮದುವೆ ಆಗು ವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದೀಗ ಐದೂವರೆ ತಿಂಗಳ ಗರ್ಭಿಣಿ ಆಗಿರುವುದಾಗಿ ತಿಳಿಸಿದ್ದಾಳೆ. ಈ ಮಧ್ಯೆ ನನ್ನ ಮಗಳು ಹಾಗೂ ಪತ್ನಿಯನ್ನು ಆತ ಮಂಗಳೂರು ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರಿಸಿದ್ದು, ಅವರನ್ನು ಪತ್ತೆ ಹಚ್ಚಬೇಕು. ಆರೋಪಿಯನ್ನು ಬಂಧಿಸಿ ಆತನನ್ನು ವಿಚಾರಣೆ ನಡೆಸಿ ನನ್ನ ಮಗಳಿಗೆ ನ್ಯಾಯ ಕೊಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕಡಬ ಠಾಣೆಗೆ ಸೋಮವಾರ ಸಂಜೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಋಷಿಕೇಶ್ ಭಗವಾನ್ ಸೋನಾವಣೆ, ‘ಇದು ಗಂಭೀರ ಪ್ರಕರಣವಾಗಿದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಸಮಗ್ರ ತನಿಖೆ ಬಳಿಕ ವಿವರ ನೀಡಲಾಗುವುದು’ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು