ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡದ ಬಾಲಕಿ ಮೇಲೆ ಲೈಂಗಿಕ ಅಪರಾಧ

Published 29 ಜುಲೈ 2023, 17:35 IST
Last Updated 29 ಜುಲೈ 2023, 17:35 IST
ಅಕ್ಷರ ಗಾತ್ರ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ, ಬೇರೆ ಬೇರೆ ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ ಬಗ್ಗೆ ಜಿಲ್ಲೆಯ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿ ಮೇಲೆ ಕೆಲವು ಯುವಕರು ಹಲವು ಸಮಯದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಗೊತ್ತಾಗಿದೆ.

‘ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಅಪರಾಧ ನಡೆಸಿದ್ದರು. ಬಾಲಕಿ ಈಚೆಗೆ ಒಂದು ದಿನ ಮನೆಗೆ ಬರುವಾಗ ತಡವಾದ ಬಗ್ಗೆ ಪೋಷಕರು ವಿಚಾರಣೆ ನಡೆಸಿದಾಗ ಆಕೆ ಈ ಬಗ್ಗೆ ತಿಳಿಸಿದ್ದಳು. ಒಟ್ಟು ಐವರು ಆರೋಪಿಗಳು ಬಾಲಕಿ ಮೇಲೆ ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ್ದಾರೆ. 2019ರಿಂದಲೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ಬಾಲಕಿಯ ಬಂಧು. ಉಳಿದವರು ಕೇರಳದವರು’ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರು, ಜಿಲ್ಲೆಯ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT