ಉಪ್ಪಿನಂಗಡಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಮಹಿಳೆಯೊಬ್ಬರು ಗುರುವಾರ ರಾತ್ರಿ ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ, ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ. ಸಹಾಯಕ್ಕಾಗಿ ಮಹಿಳೆ ಬೊಬ್ಬೆ ಹೊಡೆದಾಗ ಮನೆಯೊಳಗಿದ್ದ ಆಕೆಯ ಗಂಡ ಹಾಗೂ ಮಕ್ಕಳು ಹೊರಗೋಡಿ ಬಂದು ನೋಡಿದಾಗ ಆರೋಪಿ ಉಮೇಶ್ ಗೌಡ ಅಲ್ಲಿದ್ದುದು ಗೊತ್ತಾಗಿದೆ. ಹಿಡಿಯಲು ಯತ್ನಿಸಿದಾಗ ಆತ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದ. ಆರೋಪಿಯು ಪರಿಶಿಷ್ಟ ಪಂಗಡದ ಸಂತ್ರಸ್ತ ಮಹಿಳೆಗೆ ಜಾತಿನಿಂದನೆಯನ್ನೂ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಆರೋಪಿ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಆಫ್ಐಆರ್ ದಾಖಲಾಗಿತ್ತು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.