ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂನ್ 14ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡಿದ್ದ ಆರೋಪಿ, ಫೋನ್ ಮೂಲಕ ಸಂಪರ್ಕ ಸಾಧಿಸಿ ಆತ್ಮೀಯತೆ ಬೆಳೆಸಿದ್ದ. ಜುಲೈ 21ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿದ್ದ. ಅಲ್ಲಿಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.