ಗುರುವಾರ , ಮೇ 26, 2022
23 °C

ಲೈಂಗಿಕ ಕಿರುಕುಳ: ರಾಜೇಶ್‌ ಭಟ್‌ ವಿರುದ್ಧ ಲುಕ್‌ಔಟ್‌ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊಂದಿ, ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ. ಆರೋಪಿಯ 12 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆರೋಪಿ ಪತ್ತೆಗೆ ಎಸಿಪಿ ರಂಜಿತ್ ಬಂಡಾರು ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ತಂಡಗಳು ಆರೋಪಿಯ ಪತ್ತೆ ಕಾರ್ಯದಲ್ಲಿ ನಿರತವಾಗಿವೆ. ಸಾಕ್ಷ್ಯನಾಶಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪವಿತ್ರಾ ಆಚಾರ್ಯ ಹಾಗೂ ಅನಂತ ಭಟ್ ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು
ಹೇಳಿದ್ದಾರೆ.

ಆರೋಪಿಯ ಹೆಸರಿನಲ್ಲಿದ್ದ 12 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್‌ಗಳಿಗೆ ಮನವಿ ನೀಡಲಾಗಿದೆ. ಆರೋಪಿಯು ವಿದೇಶಕ್ಕೆ ಪ್ರಯಾಣಿಸುವುದನ್ನು ತಡೆಯಲು ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

‘ಆರೋಪಿ ಆಂಧ್ರಪ್ರದೇಶ, ತಮಿಳುನಾಡು ಮೊದಲಾದೆಡೆ ಸಂಚರಿಸುತ್ತಿರುವ ಮಾಹಿತಿ ಲಭಿಸಿದೆ. ಶೀಘ್ರದಲ್ಲಿ ತನಿಖಾ ತಂಡಗಳು ಆರೋಪಿಯನ್ನು ಬಂಧಿಸಲಿವೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು