ಮಂಗಳೂರು: ವಿದ್ಯಾರ್ಥಿಗಳ ಮೇಲೆ ಪೋಷಕರು ವಿನಾಕಾರಣ ಒತ್ತಡ ಹೇರಬಾರದು. ಮಕ್ಕಳ ಆಸಕ್ತಿಯನ್ನು ಗುರುತಿಸಿ ಪೋಷಿಸಬೇಕು. ಮೌಲ್ಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಸಲು ಸಾಧ್ಯವಿದೆ ಎಂದು ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಹೇಳಿದರು.

ಇಲ್ಲಿನ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಸುರತ್ಕಲ್ ಎನ್ಐಟಿಕೆ ಪ್ರಾಧ್ಯಾಪಕ ಉದಯ್ಕುಮಾರ್, ‘ಜಂಕ್ ಫುಡ್ಗಳ ಬಗ್ಗೆ ಪಾಲಕರು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಆಹಾರಗಳನ್ನು ಮಕ್ಕಳಿಗೆ ನೀಡುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಮಕ್ಕಳು ಆರೋಗ್ಯ ಹದಗೆಡುವ ಅಪಾಯ ಇರುತ್ತದೆ. ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವುದು ಮಕ್ಕಳ ಭವಿಷ್ಯಕ್ಕೆ ಪೂರಕವಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ‘ಪಠ್ಯದ ಜೊತೆ ಹೆಚ್ಚುವರಿಯಾಗಿ ಸ್ಪರ್ಧಾತ್ಮಕ ವಿಷಯಗಳ ಬೋಧನೆ, ಶಕ್ತಿ ಸನಾತನ-ಸಂಪದ, ಮೌಲ್ಯಾಧಾರಿತ ಶಿಕ್ಷಣದ ತರಗತಿ ಇಂತಹ ಪಠ್ಯೇತರ ಚಟುವಟಿಕೆಗಳು ನಮ್ಮ ಶಾಲೆಯ ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿವೆ’ ಎಂದರು.

ಕ್ರೀಡೆ, ಸಾಂಸ್ಕೃತಿಕ, ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗೌರವಿಸಲಾಯಿತು. ಪ್ರಾಂಶುಪಾಲ ರವಿಶಂಕರ್ ಹೆಗಡೆ ವರದಿ ವಾಚಿಸಿದರು. ಉಪ ಪ್ರಾಂಶುಪಾಲ ದೀಪಕ್ ಕುಡ್ವ ಇದ್ದರು. ಶಿಕ್ಷಕರಾದ ಶಿವರಾಜ್ ಸ್ವಾಗತಿಸಿದರು. ಶಿಕ್ಷಕಿ ತಾರಾ ಸಾಲ್ಯಾನ್ ವಂದಿಸಿದರು. ಚೈತ್ರಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.