ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳು ರಾಷ್ಟ್ರದ ಸಂಪತ್ತಾಗಬೇಕು: ಪ್ರೊ. ಎಂ. ಬಿ. ಪುರಾಣಿಕ್

Last Updated 25 ಜೂನ್ 2022, 6:43 IST
ಅಕ್ಷರ ಗಾತ್ರ

ಮಂಗಳೂರು: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶದ ಭವ್ಯ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಜೊತೆಗೆ ರಾಷ್ಟ್ರಭಕ್ತಿ, ಗುರುಭಕ್ತಿ, ಶಿಸ್ತು, ಸೇವೆ, ಪರೋಪಕಾರ ಮೊದಲಾದ ಆದರ್ಶ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ರಾಷ್ಟ್ರದ ಸಂಪತ್ತಾಗಿ ರೂಪುಗೊಳ್ಳಬೇಕು’ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್ ಹೇಳಿದರು.

ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿಯಲ್ಲಿ ರ್‍ಯಾಂಕ್ ಪಡೆದ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಸ್ಥಾನ ಪಡೆದು ಶಾರದಾ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಉಪಾಧ್ಯಕ್ಷ ಡಾ. ಸೀತಾರಾಮ ಭಟ್ ಟಿ. ಎಸ್, ಕಾರ್ಯದರ್ಶಿ ಪ್ರದೀಪ್ ಕುಮಾರ್ ಕಲ್ಕೂರ, ವಿಶ್ವಸ್ಥ ಸುಧಾಕರ ರಾವ್ ಪೇಜಾವರ, ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಸೊಡಂಕೂರು, ಉಪ ಪ್ರಾಂಶುಪಾಲ ಪ್ರಕಾಶ್ ನಾಯ್ಕ್ ಉಪಸ್ಥಿತರಿದ್ದರು.

ಉಪನ್ಯಾಸಕಿ ಅನುರಾಧಾ ಕಾಮತ್ ಸ್ವಾಗತಿಸಿದರು. ಉಪನ್ಯಾಸಕಿ ವೀಣಾ ಸುಧೀಂದ್ರ ವಂದಿಸಿದರು. ಕಂಪ್ಯೂಟರ್‌ ವಿಭಾಗದ ಮುಖ್ಯಸ್ಥೆ ಯಶೋದಾ ಎಸ್. ಕಾಮತ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT