ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚು ಲಾಭಗಳಿಸಬಹುದು ಎಂದು ನಂಬಿಸಿ ₹ 44 ಲಕ್ಷ ಹಣವನ್ನು ಆನ್ಲೈನ್ನಲ್ಲಿ ಕಟ್ಟಿಸಿಕೊಂಡು ವಂಚಿಸಿದ ಬಗ್ಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಸೆನ್ ಅಪರಾಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘2024ರ ಡಿಸೆಂಬರ್ ತಿಂಗಳಿನಲ್ಲಿ ಇನ್ಸ್ಟಾಗ್ರಾಂ ನೋಡುವಾಗ ಹಮ್ಷಫೇರ್ ಎಂಬ ಖಾತೆದಾರ ಮಹೇಶ್ ಪೂನಿಯಾ ಎಂಬ ಹೆಸರಿನಿಂದ ಪರಿಚಯಿಸಿಕೊಂಡ. ನನ್ನ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು ಅದರಲ್ಲಿ ಹೂಡಿಕೆ ಯೋಜನೆಗಳ ಬಗ್ಗೆ ಸಂದೇಶ ಕಳುಹಿಸಿದ್ದ. ಇಂಟ್ರಾ ಟ್ರೇಡಿಂಗ್ ಮತ್ತು ಸ್ಟಾಕ್ ಮಾರ್ಕೆಟಿಂಗ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದ. ಆತ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ 2025ರ ಜ. 15ರಿಂದ ಜ.17ರವರೆಗೆ ಒಟ್ಟು ₹ 44 ಲಕ್ಷ ಕಟ್ಟಿದ್ದೆ. ಹಣವನ್ನು ಮರಳಿಸುವಂತೆ ಕೋರಿದಾಗ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ. ಅನುಮಾನ ಬಂದು ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ತಿಳಿಯಿತು ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.