ಮಂಗಳೂರು: ನಗರದ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟಬಲ್ ಟ್ರಸ್ಟ್ ನೀಡುವ ಶೇಣಿ ಪ್ರಶಸ್ತಿಗೆ ಸ್ತ್ರೀ ವೇಷಧಾರಿ ಪಾತಾಳ ವೆಂಕಟರಮಣ ಭಟ್ ಆಯ್ಕೆ ಆಗಿದ್ದಾರೆ.
₹30 ಸಾವಿರ ನಗದು, ಪ್ರಶಸ್ತಿಪತ್ರ ಒಳಗೊಂಡ ಪ್ರಶಸ್ತಿಯನ್ನು ಇದೇ 15ರಂದು ಸಂಜೆ 4.20ಕ್ಕೆ ನಗರದ ಉರ್ವಸ್ಟೋರ್‌ನ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಶೇಣಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.
ಅಂದು ಮಧ್ಯಾಹ್ನ 2.30ರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಆರ್.ವಾಸುದೇವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.