ಶನಿವಾರ, ಅಕ್ಟೋಬರ್ 31, 2020
26 °C
ಟ್ವೀಟ್ ಮೂಲಕ ಸಂಸದ

ಐಟಿ: ಪ್ರಧಾನ ಆಯುಕ್ತರ ಕಚೇರಿ ಸ್ಥಳಾಂತರ ಇಲ್ಲ -ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ನಳಿನ್‌ ಕುಮಾರ್ ಕಟೀಲ್, ‘ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ, ನನ್ನ ವೈಯಕ್ತಿಕ ಮನವಿಗೆ ಸ್ಪಂದಿಸಿದ ವಿತ್ತ ಸಚಿವೆ ಹಾಗೂ ಸಹಕರಿಸಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸಹಾ ಟ್ವೀಟ್ ಮಾಡಿದ್ದು, ‘ಈ ಕುರಿತು ವಿತ್ತ ಸಚಿವರ ಬಳಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಅವರಿಗೆ ಕೃತಜ್ಞತೆಗಳು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು