ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಯಕ್ಷ ಛಂದೋಬ್ರಹ್ಮ' ಶಿಮಂತೂರು ನಾರಾಯಣ ಶೆಟ್ಟಿ ನಿಧನ

Last Updated 26 ಆಗಸ್ಟ್ 2020, 11:18 IST
ಅಕ್ಷರ ಗಾತ್ರ

ಮೂಲ್ಕಿ: 'ಯಕ್ಷ ಛಂದೋಬ್ರಹ್ಮ' ಎಂದೇ ಖ್ಯಾತರಾದ ಶಿಮಂತೂರು ನಾರಾಯಣಶೆಟ್ಟಿ (86) ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಎಳತ್ತುರು ದಿ. ಅಚ್ಚನ್ನ ಶೆಟ್ಟಿ ಹಾಗೂ ನಂದಳಿಕೆ ಕಮಲಾಕ್ಷಿ ದಂಪತಿಯ ಪುತ್ರರಾದ ಇವರು ಶಾಲಾ ಶಿಕ್ಷಕರಾಗಿ, ವಿದ್ವಾಂಸರಾಗಿ ಬರಹಗಾರರಾಗಿ, ಯಕ್ಷಗಾನ ಪ್ರಸಂಗ ಕರ್ತೃಗಳಾಗಿ ಪ್ರಸಿದ್ಧಿ ಪಡೆದಿದ್ದರು.

ಅವರ ‘ಯಕ್ಷಗಾನ ಛಂದೋಬುಧಿ’ ಕೃತಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಗೌರವ ಡಾಕ್ಟರೆಟ್ ಪ್ರದಾನ ಮಾಡಿತ್ತು. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಾಗಿರುವ ಅವರು, ತಮ್ಮ 14ರ ಹರೆಯದಲ್ಲೇ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರಸಂಗ ರಚಿಸಿದ್ದರು. ಯಕ್ಷಗಾನ ಸಾಹಿತ್ಯದಲ್ಲಿ ಛಂದಸ್ಸಿನ ಬಗ್ಗೆ ಅಪಾರ ಅಧ್ಯಯನ ನಡೆಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಿ.ಲಿಟ್ ಪದವಿ ಪಡೆದಿದ್ದರು.

ಐದನೇ ತರಗತಿಯಲ್ಲಿದ್ದಾಗಲೇ ಜೈಮಿನಿ ಭಾರತವನ್ನು ಕಂಠಪಾಠ ಮಾಡಿದ್ದರು. ಆರನೇ ತರಗತಿಯಿಂದ ನಾಗವರ್ಮನ ಛಂದೋಂಬುಧಿ, ಕೇಶಿರಾಜನ ಶಬ್ದಮಣಿ ದರ್ಪಣ, ಹೇಮಚಂದ್ರಮ ಛಂದೋ ನುಶಾಸನಗಳನ್ನು ಅಧ್ಯಯನ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT