ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು– ಮಂಗಳೂರು ವಿಶೇಷ ರೈಲು: ಸಂಸದ ನಳಿನ್‌ ಮನವಿ

ಶಿರಾಡಿ ಘಾಟಿ ಬಂದ್‌– ಇತರ ಘಾಟಿಗಳ ಮೇಲೆ ಒತ್ತಡ
Last Updated 18 ಜುಲೈ 2022, 14:28 IST
ಅಕ್ಷರ ಗಾತ್ರ

ಮಂಗಳೂರು: ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದರಿಂದ, ಸಂಪಾಜೆ ಮತ್ತು ಚಾರ್ಮಾಡಿ ಘಾಟಿಗಳಲ್ಲಿಯೂ ವಾಹನ ಸಂಚಾರ ದುಸ್ತರವಾಗಿದ್ದು, ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ.

‘ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಳಿನ್‌ ಕುಮಾರ್‌ ಕಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು- ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿದ್ದರಿಂದ ಜುಲೈ15ರಿಂದ ಶಿರಾಡಿ ಘಾಟಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕೆಲ ಷರತ್ತಿನೊಂದಿಗೆ ಕಾರು, ಜೀಪು, ಸೇರಿದಂತೆ ಸಣ್ಣ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಾರು, ಜೀಪು, ಟೆಂಪೊ, ಲಘು ವಾಹನಗಳು, ಪ್ರಯಾಣಿಕ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಂಬುಲೆನ್ಸ್‌ಗಳು ಸಕಲೇಶಪುರದಿಂದ ಆನೆಮಹಲ್–ಕ್ಯಾನಹಳ್ಳ-ಚಿನ್ನಳ್ಳಿ-ಕಡಗರವಳ್ಳಿ-ಮಾರನಹಳ್ಳಿ ಮಾರ್ಗದ ಮೂಲಕ ಮಂಗಳೂರು ತಲುಪಲು ಅವಕಾಶ ಕಲ್ಪಿಸಲಾಗಿದೆ.

ಮಂಗಳೂರಿನಿಂದ ಬರುವ ವಾಹನಗಳು ಮಾರನಹಳ್ಳಿಯಿಂದ ಕ್ಯಾಮನಹಳ್ಳಿ-ಹಾರ್ಲೆ-ಕೂಡಿಗೆ-ಆನೆಮಹಲ್-ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರು ತಲುಪಬಹುದು. ಈ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ‌ ಎಂದು ಹಾಸನ ಜಿಲ್ಲಾಧಿಕಾರಿ ಇತ್ತೀಚೆಗೆ ಆದೇಶ ಹೊರಡಿಸಿದ್ದರು.

ವಾಹನಗಳುಶಿರಾಡಿ ಘಾಟಿಯ ಬದಲು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಮೂಲಕ ಅಥವಾ ಹಾಸನ- ಬೇಲೂರು- ಮೂಡಿಗೆರೆ-ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ತೆರಳಬಹುದು. ಭಾರಿ ವಾಹನಗಳು ಈ ಎರಡೂ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ತೆರಳಬಹುದು ಅವರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT