ಉಜಿರೆ/ ಉಪ್ಪಿನಂಗಡಿ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಮತ್ಸ್ಯತೀರ್ಥ ಎಂದು ಪ್ರಸಿದ್ಧವಾದ ಶಿಶಿಲೇಶ್ವರ ದೇವಸ್ಥಾನದ ಬಳಿಯ ಬರ್ಗುಳ ಕಿಂಡಿ ಅಣೆಕಟ್ಟೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಮೈಲುತುತ್ತ (ಕಾಪರ್ ಸಲ್ಫೇಟ್) ಬಳಸಿ ಅಕ್ರಮವಾಗಿ ಮೀನು ಹಿಡಿಯಲು ಯತ್ನಿಸಿದ್ದು, ಸಾವಿರಾರು ಮೀನುಗಳು ಮೃತಪಟ್ಟಿವೆ.

ಶನಿವಾರ ಸ್ಥಳೀಯರು ನದಿತೀರದಲ್ಲಿ ಓಡಾಡುವ ವೇಳೆ ನೀರಿನಲ್ಲಿ ಸತ್ತು ತೇಲುತ್ತಿದ್ದ ಹಾಗೂ ದಡದಲ್ಲಿ ಸತ್ತು ಬಿದ್ದ ಮೀನುಗಳ ರಾಶಿ ಕಂಡು ಮಾಹಿತಿ ನೀಡಿದ್ದಾರೆ. ನೀರಿಗೆ ರಾಸಾಯನಿಕ ಹಾಕಿದ್ದರಿಂದ ಮೀನುಗಳ ಜೊತೆ ಇತರ ಜಲಚರಗಳೂ ಮೃತಪಟ್ಟಿವೆ.

ಘಟನಾಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪ್ರಮುಖರಾದ ಕರುಣಾಕರ ಶಿಶಿಲ, ಮನೋಜ್, ಉಮೇಶ್, ಲೋಕೇಶ್ ಮತ್ತು ಪುರುಷೋತ್ತಮ, ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಗೆ ಮಾಹಿತಿ ನೀಡಿ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶಿಶಿಲೇಶ್ವರ ದೇವಸ್ಥಾನದ ಸುತ್ತ ಮುತ್ತ ಸುಮಾರು ಎರಡು ಕಿ.ಮೀ. ವ್ಯಾಪ್ತಿಯನ್ನು ಮೀನುಗಳ ಸುರಕ್ಷಿತ ವಲಯ ಎಂದು ಪರಿಗಣಿಸಲಾಗಿದ್ದು, ಅಲ್ಲಿ ಮೀನುಗಾರಿಕೆಗೆ ಅವಕಾಶವಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನೀರಿನ ಮಾದರಿ ಸಂಗ್ರಹಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ದೇವರ ಮೀನುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಇಂಥ ದುಷೃತ್ಯ ಖಂಡನೀಯ. ಈ ರೀತಿಯ ಘಟನೆ ಮರುಕಳಿಸುತ್ತಿರುವುದು ವಿಷಾದನೀಯ. ಮುಜರಾಯಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಗಳು ದೇವರ ಮೀನುಗಳ ಸಂರಕ್ಷಣೆಯ ವಿಚಾರದಲ್ಲಿ ಬೇಜವಾಬ್ದಾರಿತನ ತೋರಬಾರದು. ಈ ಕುರಿತು ಕರಪತ್ರ ವಿತರಣೆ, ಸೂಚನಾ ಫಲಕಗಳ ಅಳವಡಿಕೆ, ಭಕ್ತರ ಸಭೆ ಸೇರಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುವುದುಅನಿವಾರ್ಯ ವಾಗಬಹುದು ಎಂದು ಜಿಲ್ಲಾ ಧರ್ಮಪ್ರಸಾರ ಪ್ರಮುಖ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-1417304501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.