ಮಂಗಳವಾರ, ಜನವರಿ 25, 2022
28 °C
ಪಾಳು ಬಿದ್ದ ಕಾಪು ಉಮಾಮಹೇಶ್ವರ ಕ್ಷೇತ್ರ

ಬಂಟ್ವಾಳ: ಪುರಾತನ ಶಿವಲಿಂಗ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ ಶಿವಾಲಯದ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಒಟ್ಟು ಸೇರಿ ಭಜನೆ ನಡೆಸುತ್ತಿದ್ದರು. ಇಲ್ಲಿಗೆ ಸಮೀಪದಲ್ಲೇ ಸೋಮವಾರ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.

ಈಚೆಗಷ್ಟೇ ನಡೆಸಿದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ ಬಂದಿತ್ತು. ಇದಕ್ಕಾಗಿ ಸ್ಥಳೀಯ ಪಚ್ಚೇರುಪಲ್ಕೆ ರಾಮಣ್ಣ ಮೂಲ್ಯ ಎಂಬುವರ ಜಮೀನಿನಲ್ಲಿ ಉತ್ಖನನ ನಡೆಸಿದಾಗ ಈ ಶಿವಲಿಂಗ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಅಪಾರ ಮಂದಿ ಭಕ್ತರು ಶಿವಲಿಂಗಕ್ಕೆ ಸೀಯಾಳ ಅಭಿಷೇಕ ನಡೆಸಿ ಸಂತಸಪಟ್ಟರು.

ವೇಣೂರು ಅಜಿಲಸೀಮೆ ಮಾಗಣೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಈ ಶಿವಾಲಯ ಕೂಡಾ ಒಂದು. ಇಲ್ಲಿನ ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಕುಡಂಬೆಟ್ಟು, ಮೂಡುಪಡುಕೋಡಿ, ಪಿಲಾತಬೆಟ್ಟು, ಇರ್ವತ್ತೂರು ಹೀಗೆ 7 ಗ್ರಾಮಗಳ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ವಾಂಬೆಟ್ಟು ತಿಳಿಸಿದ್ದಾರೆ.

ತಂತ್ರಿ ಶ್ರೀಪಾದ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.