ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಕ್ರಮಿಸಿ ಲೇಔಟ್ ಮಾಡಲು ಬಿಡಬೇಡಿ: ಶಾಸಕ ಡಾ.ವೈ. ಭರತ್‌ ಶೆಟ್ಟಿ ಸೂಚನೆ

Last Updated 9 ನವೆಂಬರ್ 2021, 15:50 IST
ಅಕ್ಷರ ಗಾತ್ರ

ಮಂಗಳೂರು: ಲೇಔಟ್ ಅಥವಾ ಇತರ ನಿರ್ಮಾಣ ಕಾಮಗಾರಿಗೆ ಅನುಮತಿ ನೀಡುವ ಮೊದಲೇ ಕೂಲಂಕಷವಾಗಿ ಪರಿಶೀಲಿಸಬೇಕು. ಬಫರ್ ಝೋನ್ ಅಥವಾ ಅತಿಕ್ರಮಣ ಮಾಡಿ ಕಟ್ಟಡ ಅಥವಾ ಲೇಔಟ್ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸೂಚನೆ ನೀಡಿದರು.

ನಗರದ ಮುಡಾ ಕಚೇರಿಯಲ್ಲಿ ಮಂಗಳವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳ ಹಿಂದೆ ರಾಜಕಾಲುವೆಗಳನ್ನು ಒತ್ತುವರಿ ಮಾಡಿ, ಅಕ್ರಮ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದ್ದು, ಅದರಿಂದಲೇ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ನಾಗರಿಕರಿಗೆ ಪ್ರತಿ ವರ್ಷ ಸಾಕಷ್ಟು ಸಮಸ್ಯೆಯಾಗುತ್ತಿತ್ತು. ಇನ್ನು ಮುಂದೆ ಹಾಗೆ ಆಗಬಾರದು ಎಂದು ಸೂಚಿಸಿದರು.

ಮುಡಾ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ನಾಗರಿಕರಿಂದ ದೂರುಗಳು ಬಂದಿವೆಯೋ ಅಲ್ಲೆಲ್ಲ ಕಾರ್ಯಾಚರಣೆ ಮಾಡಲು ನಿರ್ಧರಿಸಿ, ಅಧಿಕಾರಿಗಳಿಗೆ ಸೂಚಿಸಲಾಯಿತು.

ಶಾಸಕ ಡಿ.ವೇದವ್ಯಾಸ ಕಾಮತ್‌ ಮಾತನಾಡಿ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನೇಕ ಪ್ರಮುಖ ಕೆರೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಯೋಜನೆ ರೂಪಿಸಲಾಗಿದೆ. ಈಗಾಗಲೇ ಕೆಲವೊಂದು ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದು, ಅವುಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ನಗರದ ಪ್ರಮುಖ ಕೇಂದ್ರಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಉದ್ಯಾನ ನಿರ್ಮಾಣ ಮತ್ತು ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದ್ದು, ಆಯ್ದ ಕೆಲವೊಂದು ಸ್ಥಳಗಳನ್ನು ಗುರುತಿಸಿ ಉದ್ಯಾನ ಅಭಿವೃದ್ಧಿ ಮಾಡಲಾಗುವುದು ಎಂದರು.

ಶಾಸಕ ಉಮಾನಾಥ ಕೋಟ್ಯಾನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಆಯುಕ್ತ ಭಾಸ್ಕರ್, ಅಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT