ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಆದ್ಯತೆ: ಸಚಿವ ಶ್ರೀಮಂತ ಪಾಟೀಲ

ಅಲ್ಪಸಂಖ್ಯಾತ ಶಾಲೆಗಳ ಕಟ್ಟಡ ಉದ್ಘಾಟನೆ
Last Updated 12 ಫೆಬ್ರುವರಿ 2021, 2:58 IST
ಅಕ್ಷರ ಗಾತ್ರ

ಮುಡಿಪು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ, ಕೌಶಲವನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಉದ್ಯೋಗ ಆಧಾರಿತ ಶಿಕ್ಷಣ ಸಂಸ್ಥೆಗಳಾದ ಐಟಿಐ ಶಿಕ್ಷಣ ಸಂಸ್ಥೆಯನ್ನು ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸ
ಲಾಗುವುದು ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಣಾಜೆ ಮತ್ತು ಮಂಜನಾಡಿ ಸರ್ಕಾರಿ ಮುಸ್ಲಿಂ ವಸತಿ ಶಾಲೆ ನೂತನ ಕಟ್ಟಡಗಳ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದ ನಾಲ್ಕು ವಿಭಾಗಗಳ ಮಟ್ಟದಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ಶಿಕ್ಷಣ ಪ್ರಾರಂಭಿಸಲಾಗುವುದು. ಅಲ್ಪಸಂಖ್ಯಾತರಿಗೆ ಸ್ವ ಉದ್ಯೋಗ ಸೇರಿದಂತೆ ವಿವಿಧ ಉದ್ದೇಶಗಳಿಗೆ ಸಾಲ ಸೌಲಭ್ಯ ಪಡೆಯಲು, ಬ್ಯಾಂಕ್ ಖಾತೆ ಜೋಡಣೆ ಸೇರಿದಂತೆ ಅನೇಕ ತೊಡಕುಗಳು ಎದುರಾಗುತ್ತಿವೆ. ಬ್ಯಾಂಕ್ ಖಾತೆ ಜೋಡಣೆ ಇಲ್ಲದೇ ಉದ್ಯೋಗ ಮಾಡಲು ₹ 2 ಲಕ್ಷ ಸಾಲ ಸಿಗುವಂತಾಗಲು, ವ್ಯವಸ್ಥೆ ಸರಳೀಕರಣಗೊಳಿಸಲಾಗುವುದು ಎಂದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಬೇರೆ ಸಾಮಾನ್ಯ ಪಠ್ಯಕ್ರಮ ಸೇರಿಸಿ, ಎಸ್ಸೆಸ್ಸೆಲ್ಸಿಗೆ ಸಮಾನ ಮಾನ್ಯತೆ ಸಿಗುವ ವ್ಯವಸ್ಥೆ ಮಾಡಿದರೆ, ಇದನ್ನು ಆಧರಿಸಿ ಅವರು ಐಟಿಟಿ ಸೇರಿದಂತೆ ಮುಂದಿನ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಎಲ್ಲರ ಸಲಹೆ ಪಡೆದು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು, ಪುದು ಫರಂಗಿಪೇಟೆಯ ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಬೋಳಿಯಾರು ಮೌಲಾನಾ ಆಜಾದ್ ಮಾದರಿ ಶಾಲೆ ಕಟ್ಟಡಗಳ ಶಂಕುಸ್ಥಾಪನೆಯನ್ನು ಸಚಿವರು ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು, ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಂಜನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಸ್ರೀನಾ, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ, ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ.ಎಸ್. ಅಬ್ದುಲ್ಲಾ ಸಾಮಣಿಗೆ, ಪ್ರಮುಖರಾದ ಶೌಕತ್ ಅಲಿ, ಅಚ್ಯುತ ಗಟ್ಟಿ, ನಝರ್ ಷಾ, ಸಂತೋಷ್ ಶೆಟ್ಟಿ, ಎನ್ ಎಸ್ ಕರೀಂ, ಫಯಾಜುದ್ದೀನ್, ನಾಗಪ್ರಸಾದ್ ರೆಡ್ಡಿ, ಉಮರಬ್ಬ, ಮಹಾಬಲೇಶ್ವರ ನಾಯ್ಕ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೆಹಬೂಬ ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮರಬ್ಬ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT