ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದಳೆಗಾರ ಪೆರುವಾಯಿ ನಾರಾಯಣ ಭಟ್‌ಗೆ `ಶ್ರೀಹರಿಲೀಲಾ ಯಕ್ಷನಾದ ಪ್ರಶಸ್ತಿ'

Last Updated 21 ಅಕ್ಟೋಬರ್ 2022, 11:41 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಯಕ್ಷಗಾನದ ಗುರುದಂಪತಿ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ಅವರ ಹೆಸರಿನಲ್ಲಿ ಡಿಜಿ ಯಕ್ಷ ಫೌಂಡೇಷನ್ ವತಿಯಿಂದ ನೀಡಲಾಗುವ ‘ಶ್ರೀಹರಿಲೀಲಾ ಯಕ್ಷನಾದ ಪ್ರಶಸ್ತಿ’ಗೆ ಮದ್ದಳೆಗಾರ ಪೆರುವಾಯಿ ನಾರಾಯಣ ಭಟ್ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಷನ್‌ನ ನಿರ್ದೇಶಕ ಅವಿನಾಶ್ ಬೈಪಡಿತ್ತಾಯ, ನ.12ರಂದು ಮಧ್ಯಾಹ್ನ 3ಗಂಟೆಗೆ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ₹ 10,076 ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದರು.

ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಆಶೀರ್ವಚನ ನೀಡುವರು. ಮದ್ದಳೆಗಾರ, ಕರ್ಣಾಟಕ ಬ್ಯಾಕ್ ಅಧಿಕಾರಿ ಕೃಷ್ಣಪ್ರಕಾಶ್ ಉಳಿತ್ತಾಯ ಅಭಿನಂದನಾ ಭಾಷಣ ಮಾಡುವರು. ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿರುವರು. ಸಂಜೆ 5ರಿಂದ ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್ ನಿರ್ದೇಶನದಲ್ಲಿ ಬಜಪೆ ತಲಕಳದ ಶ್ರೀಶ ಯಕ್ಷ ಕಲಿಕಾ ಕೇಂದ್ರದ ಮಕ್ಕಳಿಂದ ಹೊಸ್ತೋಟ ಮಂಜುನಾಥ ಭಾಗವತ ವಿರಚಿತ ‘ಶ್ರೀ ಶಿವಲೀಲಾ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆಎಂದು ತಿಳಿಸಿದರು.

ಹರಿನಾರಾಯಣ ಬೈಪಾಡಿತ್ತಾಯ, ಲೀಲಾವತಿ ಬೈಪಾಡಿತ್ತಾಯ, ಪ್ರಶಸ್ತಿ ಪ್ರದಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೊಂಕಣಾಜೆ ಮತ್ತು ಕಾರ್ಯದರ್ಶಿ ಆನಂದ ಗುಡಿಗಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT