ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ‘ಶ್ರೀ ಹರಿಲೀಲಾ ಯಕ್ಷನಾದ’ ಪ್ರಶಸ್ತಿ

Published : 22 ಸೆಪ್ಟೆಂಬರ್ 2024, 6:45 IST
Last Updated : 22 ಸೆಪ್ಟೆಂಬರ್ 2024, 6:45 IST
ಫಾಲೋ ಮಾಡಿ
Comments

ಮಂಗಳೂರು: ಯಕ್ಷಗಾನದ ಗುರು ದಂಪತಿ ಲೀಲಾವತಿ ಬೈಪಾಡಿತ್ತಾಯ ಹಾಗೂ ಹರಿನಾರಾಯಣ ಬೈಪಾಡಿತ್ತಾಯ ಹೆಸರಿನಲ್ಲಿ ನೀಡುವ 2024ನೇ ಸಾಲಿನ ‘ಶ್ರೀ ಹರಿಲೀಲಾ ಯಕ್ಷನಾದ’ ಪ್ರಶಸ್ತಿಗೆ ಯಕ್ಷಗುರು, ಮದ್ದಳೆಗಾರ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಿಜಿ ಯಕ್ಷ ಫೌಂಡೇಶನ್ ನಿರ್ದೇಶಕ ಅವಿನಾಶ್ ಬೈಪಾಡಿತ್ತಾಯ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಶಸ್ತಿಯು ₹10,078 ನಗದು, ಬಿನ್ನವತ್ತಳೆ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಲೀಲಾವತಿ ಮತ್ತು ಹರಿನಾರಾಯಣ ಬೈಪಾಡಿತ್ತಾಯ ದಂಪತಿಯ ಶಿಷ್ಯವೃಂದದವರು ಡಿಜಿ ಯಕ್ಷ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು, ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯಿಂದ ಪೊಳಲಿಯ ರಾಜರಾಜೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದರು.

ಬೈಪಾಡಿತ್ತಾಯರ ಶಿಷ್ಯರಿಂದ ‘ಯಕ್ಷ-ಗಾನ- ನಾದ ವೈಖರಿ’ ಯಕ್ಷಗಾನೀಯ ಪದ್ಯಗಳ ಹಾಡುಗಾರಿಕೆ ಪ್ರಸ್ತುತಗೊಳ್ಳಲಿದೆ. ಕರುಣಾಕರ ಶೆಟ್ಟಿಗಾರ್ ಕಾಶಿಪಟ್ಣ, ಶ್ರೀನಿವಾಸ ಬಳ್ಳಮಂಜ, ಗಿರೀಶ್ ರೈ ಕಕ್ಕೆಪದವು, ಅಡೂರು ಜಯರಾಮ, ಶಾಲಿನಿ ಹೆಬ್ಬಾರ್, ದಿವ್ಯಶ್ರೀ ಪುತ್ತಿಗೆ ಇತರರು ಯಕ್ಷಗಾನದ ಹಾಡುಗಳನ್ನು ಪ್ರಸ್ತುತಪಡಿಸುವರು. ಚೆಂಡೆ-ಮದ್ದಳೆಯಲ್ಲಿ ಅಡೂರು ಲಕ್ಷ್ಮೀನಾರಾಯಣ ರಾವ್, ಶಂಕರ ಭಟ್ ಕಲ್ಮಡ್ಕ, ಸೋಮಶೇಖರ್ ಭಟ್ ಕಾಶಿಪಟ್ಣ, ಗಣೇಶ್ ಭಟ್ ಬೆಳ್ಳಾರೆ, ಗುರುಪ್ರಸಾದ್ ಬೊಳಿಂಜಡ್ಕ, ವಿಕಾಸ ರಾವ್ ಕೆರೆಕಾಡು, ಆನಂದ ಗುಡಿಗಾರ್, ಚಂದ್ರಶೇಖರ ಭಟ್ ಕೊಂಕಣಾಜೆ, ಹರೀಶ್ ರಾವ್ ಅಡೂರು, ಅವಿನಾಶ್ ಬೈಪಾಡಿತ್ತಾಯ, ಸಮರ್ಥ ಉಡುಪ ಭಾಗವಹಿಸುವರು. ನಂತರ ಹರಿನಾರಾಯಣ ಬೈಪಾಡಿತ್ತಾಯರ ಪರಿಕಲ್ಪನೆ, ಸಂಯೋಜನೆಯಲ್ಲಿ ಶಿಷ್ಯರು 15 ಚೆಂಡೆಗಳಲ್ಲಿ ‘ಅಬ್ಬರ ತಾಳ’ ನಡೆಸಿಕೊಡಲಿದ್ದಾರೆ ಎಂದರು.

ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ ಜೋಶಿ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಪೊಳಲಿ ಕ್ಷೇತ್ರದ ಆಡಳಿತಾಧಿಕಾರಿ ಪ್ರವೀಣ್, ಕ್ಷೇತ್ರದ ಆಡಳಿತ ಮೊಕ್ತೇಸರ ಎ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಯಕ್ಷಕಲಾ ಪೊಳಲಿ ಸಂಚಾಲಕ ವೆಂಕಟೇಶ ನಾವಡ ಭಾಗವಹಿಸುವರು. ಪುರುಷೋತ್ತಮ್ ಭಟ್ ನಿಡುವಜೆ ಅಭಿನಂದನಾ ಮಾತನಾಡುವರು ಎಂದು ತಿಳಿಸಿದರು.

ಪ್ರಶಸ್ತಿ ಪ್ರದಾನ ಸಮಿತಿಯ ಚಂದ್ರಶೇಖರ ಭಟ್ ಕೊಂಕಣಾಜೆ, ಆನಂದ ಗುಡಿಗಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT