ಶುಕ್ರವಾರ, ಡಿಸೆಂಬರ್ 4, 2020
21 °C

ತಿಂಗಳಲ್ಲಿ ವಿರೋಧ ಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಬದಲು: ನಳಿನ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇನ್ನು ಒಂದೂವರೆ ತಿಂಗಳಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಕುರಿತು ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

 ಈ ಮಾಹಿತಿಯಿಂದ ವಿಚಲಿತರಾದ ಸಿದ್ದರಾಮಯ್ಯ ಅವರು, ತಾನು ಅಧಿಕಾರದಲ್ಲಿ ಉಳಿಯುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಡಿಯೂರಪ್ಪ ಮಂದಿನ 2.5 ವರ್ಷ ಅಧಿಕಾರ ಪೂರ್ಣಗೊಳಿಸಲಿದ್ದಾರೆ ಎಂದರು.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ತಿಕ್ಕಾಟ ಹೆಚ್ಚಾಗಿದ್ದು, ಶಾಸಕರು ಅತಂತ್ರರಾಗಿದ್ದಾರೆ. ಅಂತಹ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಕದ ತಟ್ಟುತ್ತಿದ್ದಾರೆ. ಡಿಜೆ ಹಳ್ಳಿ ಗಲಭೆಯೇ ಡಿ.ಕೆ.ಶಿವಕುಮಾರ್  ಹಾಗೂ ಸಿದ್ದರಾಮಯ್ಯ ಅವರ ನಡುವಿನ ಆಂತರಿಕ ಜಗ್ಗಾಟಕ್ಕೆ ಸಾಕ್ಷಿ. ಅಖಂಡ ಶ್ರೀನೀವಾಸ ಅವರು ಸಿದ್ದರಾಮಯ್ಯ ಬೆಂಬಲಿಗರು. ಸಂಪತ್ ರಾಜ್ ಅವರು ಡಿ.ಕೆ.ಶಿವಕುಮಾರ್ ಬೆಂಬಲಿಗರು ಎಂದರು.

ಶಿರಾದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಸಿದ್ದರಾಮಯ್ಯ ಒಳೊಗಿಂದೊಳಗೆ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು