ಮಂಗಳೂರು: ‘ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ, ಮತ್ತೆ ಜಾತಿ ಗಣತಿ ನಡೆಸುವುದಾಗಿ ಪ್ರಸ್ತಾಪಿಸಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿರುವುದೇ ಜನರ ಮನಸ್ಸಿನಿಂದ ಕಾಲ್ತುಳಿತ ಘಟನೆಯನ್ನು ಮರೆಸಿ, ಹೊಸ ವಿಚಾರ ತರಬೇಕು ಎಂದು ತಿಳಿಸಲು’ ಎಂದರು.

ಎಚ್. ಕಾಂತರಾಜು ಆಯೋಗ ಮತ್ತು ಜಯಪ್ರಕಾಶ್ ಹೆಗ್ಡೆ ಆಯೋಗದ ನೇತೃತ್ವದಲ್ಲಿ ನಡೆದ ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ ಸಿದ್ಧಪಡಿಸಲು 10 ವರ್ಷಗಳಲ್ಲಿ ಎಷ್ಟು ಖರ್ಚು ಮಾಡಿದ್ದೀರಿ? ಎಲ್ಲರ ವಿರೋಧದ ನಡುವೆಯೂ ಅಶಾಂತಿ ಸೃಷ್ಟಿಸಲು ಆ ವರದಿಯನ್ನು ಮಾಡಲಾಗಿದೆ. ಜಾತಿ -ಜಾತಿಗಳ ನಡುವೆ ಒಡಕು ಸೃಷ್ಟಿಸಿ ಉಪ ಜಾತಿಗಳು ಹೊಡೆದಾಡಿಕೊಳ್ಳುವಂತೆ ಮಾಡುವ ವ್ಯವಸ್ಥಿತ ಷಡ್ಯಂತ್ರ ಇದರ ಹಿಂದಿದೆ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.