ಶುಕ್ರವಾರ, ಡಿಸೆಂಬರ್ 3, 2021
26 °C
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಲಾಂಛನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ.

ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ದೇವರ ಉತ್ಸವ ಮೂರ್ತಿಯನ್ನು ಹೋಲುವ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ಚಿತ್ರವು ಲಾಂಛನದ ಮಧ್ಯ ಭಾಗದಲ್ಲಿದೆ. ಮೀನುಗಾರಿಕೆ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಲಾಂಛನವನ್ನು ಅನಾವರಣಗೊಳಿಸಿದ್ದರು.

 ಲಾಂಛನದ ಕೆಳ ಭಾಗದಲ್ಲಿ ಅಜೇಯೋಯಂ ವಿಶ್ವಸ್ಯ ಎಂಬ ವ್ಯಾಖ್ಯೆಯನ್ನು ಕೆತ್ತಲಾಗಿದೆ. ವ್ಯಾಖ್ಯೆಯ ಇಕ್ಕೆಲದಲ್ಲಿ ಷಣ್ಮುಖನ ವಾಹನವಾದ ನವಿಲಿನ ಗರಿಯನ್ನು ಚಿತ್ರೀಕರಿಸಲಾಗಿದೆ. ಲಾಂಛನದ ಸುತ್ತಲೂ ಕನ್ನಡ, ದೇವನಾಗರಿ ಮತ್ತು ಇಂಗ್ಲಿಷ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಎಂಬ ಕೆತ್ತನೆ ಇದೆ. ಮುಂದೆ ರಥಬೀದಿಯಲ್ಲಿ ನಿರ್ಮಾಣವಾಗುವ ಪಾರಂಪರಿಕ ಕಲ್ಲಿನ ಕಟ್ಟಡದಲ್ಲಿ ಲಾಂಛನವನ್ನು ಕಲ್ಲಿನಿಂದ ಕೆತ್ತನೆ ಮಾಡಿ ಅನಾವರಣಗೊಳಿಸಲು ಆಡಳಿತ ಮಂಡಳಿ ಚಿಂತನೆ ನಡೆಸಿದೆ.

ಇ-ಸೇವೆಗೆ ಉಪಯುಕ್ತ: ದೇವಳದ ವೆಬ್‌ಸೈಟ್‌ನಲ್ಲಿ ಲಾಂಛನ ಪ್ರಧಾನವಾಗಿ ಗೋಚರಿಸಲಿದೆ. ಇ-ಆಡಳಿತ ಮತ್ತು ಇ-ಸೇವೆಗೆ ಅನುಕೂಲವಾಗಲು ಆಡಳಿತ ಮಂಡಳಿ ನೂತನ ಲಾಂಛನವನ್ನು ಸಿದ್ಧಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು