ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ತಾಲ್ಲೂಕಿನಲ್ಲಿ ಸ್ಕೌಟ್ಸ್ ಭವನ

ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯ ಆಯುಕ್ತ ಸಿಂಧ್ಯಾ
Last Updated 2 ಜನವರಿ 2022, 4:31 IST
ಅಕ್ಷರ ಗಾತ್ರ

ಮಂಗಳೂರು: ‘ರಾಜ್ಯದ ಪ್ರತಿ ತಾಲ್ಲೂ‌ಕಿನಲ್ಲೂ ಸ್ಕೌಟ್ ಭವನ ನಿರ್ಮಾಣವಾಗಬೇಕು ಎಂಬ ಗುರಿ ಇಟ್ಟು, ಕಾರ್ಯ ಪ್ರವೃತ್ತರಾಗಿದ್ದೇವೆ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸ್ಕೌಟ್ಸ್ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮುತುವರ್ಜಿಯಲ್ಲಿ ಭವನ ನಿರ್ಮಾಣವಾಗಲಿದೆ. ಮಂಗಳೂರಿನ ಸ್ಕೌಟ್ಸ್ ಭವನವನ್ನು ಕೂಡ ನವೀಕರಣ ಮಾಡಲು ಗಮನ ಹರಿಸಲಾಗುತ್ತದೆ ಎಂದು ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಸನ್ನಡತೆಯೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಿದ್ದಾರೆ. ಈ ಸಂಸ್ಥೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದ ಜತೆಗೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಕೋವಿಡ್‌ ಸಂದರ್ಭದಲ್ಲಿ ಪೊಲೀಸ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳಿಗೆ 1 ಕೋಟಿ ಮಾಸ್ಕ್‌ಗಳನ್ನು ವಿತರಿಸುವ ಕಾರ್ಯ ಮಾಡಲಾಗಿದೆ. 10 ಸಾವಿರಕ್ಕೂ ಅಧಿಕ ರೋವರ್ಸ್‌ ಮತ್ತು ರೇಂಜರ್ಸ್‌ಗಳು ವಾರಿಯರ್ಸ್‌ಗಳಾಗಿ ಕೆಲಸ ಮಾಡಿದ್ದಾರೆ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಡೆಪ್ಯುಟಿ ಇಂಟರ್‌ ನ್ಯಾಷನಲ್ ಕಮಿಷನರ್ ಮಧುಸೂದನ್ ಎ.ಎಸ್., ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ ಭಟ್ ಇದ್ದರು. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಬಿ.ಎನ್. ವಂದಿಸಿದರು. ಭಾಸ್ಕರ ರೈ ಕಟ್ಟ ನಿರೂಪಿಸಿದರು.

ಸಂಸ್ಥೆಗಳಿಗೆ 1 ಕೋಟಿ ಮಾಸ್ಕ್‌ ವಿತರಣೆ

ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ವ್ಯಕ್ತಿತ್ವ ನಿರ್ಮಾಣ

ಮಂಗಳೂರಿನ ಸ್ಕೌಟ್ಸ್ ಭವನ ನವೀಕರಣದ ಚಿಂತನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT