ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ರ್‍ಯಾಗಿಂಗ್‌ ಪ್ರಕರಣ ಸಂಬಂಧ 6 ವಿದ್ಯಾರ್ಥಿಗಳ ಬಂಧನ

Last Updated 16 ಜುಲೈ 2021, 12:56 IST
ಅಕ್ಷರ ಗಾತ್ರ

ಮಂಗಳೂರು: ನಗರದ ಫಳ್ನೀರ್‌ನ ಇಂದಿರಾ ಕಾಲೇಜಿನಲ್ಲಿ ರ್‍ಯಾಗಿಂಗ್‌ ಪ್ರಕರಣ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳಾದ ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ವಿವರ: ಜು.14ರಂದು ರಾತ್ರಿ 8 ಗಂಟೆಗೆ ನಗರದ ಫಳ್ನೀರ್ ರಸ್ತೆಯ ಹೋಟೆಲ್‌ನಲ್ಲಿ ವಿದ್ಯಾರ್ಥಿ ಮ್ಯಾನುಯಲ್ ಬಾಬು ತಮ್ಮ ಸ್ನೇಹಿತರಾದ ಜೋಬಿನ್ ಹಾಗೂ ಶಾಕೀರ್ ಜೊತೆಗೆ ಊಟಕ್ಕೆ ತೆರಳಿದ್ದಾರೆ. ಈ ಸಮಯದಲ್ಲಿ ಪರಿಚಯಸ್ಥರಾದ ಇಂದಿರಾ ಕಾಲೇಜಿನ ವಿದ್ಯಾರ್ಥಿ ಶ್ರೀಲಾಲ್, ಮ್ಯಾನುಯಲ್‌ ಬಾಬುಗೆ ರ್‍ಯಾಗಿಂಗ್‌ ಆರಂಭಿಸಿದ್ದ. ‘ಏನು ಮುಖ ನೋಡುತ್ತಿಯಾ. ನೀವು ಜೂನಿಯರ್‌ಗಳು, ನಾವು ಬರುವಾಗ ಎದ್ದು ನಿಂತು ಗೌರವ ಕೊಡಬೇಕು’ ಎಂದು ರ‍್ಯಾಗಿಂಗ್‌ ನಡೆಸಿದ್ದ.

ನಂತರ ರಾತ್ರಿ 10.30 ಕ್ಕೆ ಮ್ಯಾನುಯಲ್‌ ವಾಸಿಸುತ್ತಿದ್ದ ಅತ್ತಾವರದ ಅಪಾರ್ಟ್‌ಮೆಂಟ್‌ಗೆ ಆಯುಧಗಳೊಂದಿಗೆ ಬಂದ ಆರು ಮಂದಿ, ರೂಂ ಪ್ರವೇಶಿಸಿ ಮತ್ತೆ ನಿಂದಿಸಿದ್ದಾರೆ. ಬಳಿಕ ಬಟ್ಟೆಗಳನ್ನು ತೆಗೆಸಿ ಒಳಉಡುಪಿನಲ್ಲಿ ನಿಲ್ಲಲು ಹೇಳಿದ್ದಾರೆ. ಇದಕ್ಕೆ ಒಪ್ಪದೇ ಇದ್ದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ಅಲ್ಲದೆ, ಆರೋಪಿಗಳು ಜೀವ ಬೆದರಿಕೆಯನ್ನೂ ಒಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿದ್ದ ವಿದ್ಯಾರ್ಥಿಗಳು ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದಿದ್ದು, ಆರೋಪಿಗಳಿಗೆ ಹೆದರಿ ಆಸ್ಪತ್ರೆಯಿಂದ ತೆರಳಿದ್ದರು. ಮನೆಗೆ ಹೋಗಿ ತಿಳಿಸಿದಾಗ, ಪಾಲಕರು ದೂರು ಕೊಡುವಂತೆ ಸಲಹೆ ನೀಡಿದ್ದರು. ಅದರಂತೆ ರ್‍ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದರು.

ತನಿಖೆ ಕೈಗೆತ್ತಿಕೊಂಡ ಪೊಲೀಸ್‌ ಅಧಿಕಾರಿಗಳು, ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT