ಶುಕ್ರವಾರ, ಮಾರ್ಚ್ 31, 2023
22 °C
ಸಹಕಾರಿ ನೌಕರರ ಸಹಕಾರಿ ಸಂಘದ ಸ್ಥಳಾಂತರಿತ ಶಾಖೆ ಉದ್ಘಾಟನೆ

ಎಸ್‍ಕೆಸಿಇಸಿಎಸ್‌ ಸಹಕಾರಿ ನೌಕರರ ಶಕ್ತಿ: ಎಂ.ಎನ್. ರಾಜೇಂದ್ರ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘ (ಎಸ್‍ಕೆಸಿಇಸಿಎಸ್) ಸಹಕಾರಿ ನೌಕರರ ಆರ್ಥಿಕ ಶಕ್ತಿಯಾಗಿ ಬೆಳೆದು ಮಾದರಿ ಸಂಘವಾಗಿದೆ’ ಎಂದು ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಸಂಘದ ಕೊಡಿಯಾಲ್‍ಬೈಲ್ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಅದರ ಉದ್ಘಾಟನೆಯನ್ನು ಮಂಗಳವಾರ ನೆರವೇರಿಸಿ ಅವರು ಮಾತನಾಡಿದರು. ಕೊಡಿಯಾಲ್‍ಬೈಲ್ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮಾಡಿರುವುದು ಉತ್ತಮ ಕೆಲಸ ಎಂದರು.

ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಎಸ್‍ಸಿಡಿಸಿಸಿ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಕುದ್ರೋಳಿ ಭಗವತಿ ದೇವಸ್ಥಾನದ ಮೊಕ್ತೇಸರ ನಾರಾಯಣ ಮುಖ್ಯ ಅತಿಥಿಗಳಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಕುದ್ರೋಳಿ ಭಗವತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಕುಂಟಲ್‍ಪಾಡಿ, ಸಂಘದ ಮಾಜಿ ಅಧ್ಯಕ್ಷ ಕೆ. ಅಣ್ಣಯ್ಯ ಶೇರಿಗಾರ್, ಕೆ. ಸುಧಾಕರ ಕರ್ಕೇರ, ಕಾನೂನು ಸಲಹೆಗಾರ ಪ್ರೇಮಾನಂದ ಕಿಣಿ. ಎಸ್‍ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕ ಗೋಪಿನಾಥ್ ಭಟ್, ಸಂಘದ ಅಧ್ಯಕ್ಷ ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷ ದಿವಾಕರ ಶೆಟ್ಟಿ, ನಿರ್ದೇಶಕರಾದ ಪುಷ್ಪರಾಜ್ ಎಂ.ಎಸ್., ರಾಘವ ಆರ್. ಉಚ್ಚಿಲ್, ಶುಭಲಕ್ಷ್ಮೀ ವಿ. ರೈ, ವಿಶ್ವೇಶ್ವರ ಐತಾಳ್, ಜಯಪ್ರಕಾಶ್ ರೈ ಸಿ., ವಿಶ್ವನಾಥ್ ಕೆ.ಟಿ., ಶಿವಾನಂದ ಪಿ., ಗಿರಿಧರ್, ಅರುಣ್‍ಕುಮಾರ್, ಮೋಹನ್ ಎಸ್., ಗೀತಾಕ್ಷಿ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಇದ್ದರು.

‘ಸದಸ್ಯರ ಸಂಖ್ಯೆ ಹೆಚ್ಚಿಸಿ’: ‘ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘವು ₹61.17 ಕೋಟಿ ಠೇವಣಿ ಹೊಂದಿದ್ದು, ₹48.01 ಕೋಟಿ ಸಾಲ ನೀಡಿದೆ. 1,200 ಸದಸ್ಯರನ್ನು ಹೊಂದಿರುವ ಈ ಬ್ಯಾಂಕ್ ₹34.32 ಲಕ್ಷ ಪಾಲು ಬಂಡವಾಳವನ್ನು ಹೊಂದಿ, ಲಾಭದಲ್ಲಿದೆ. ಸಹಕಾರ ಸಂಘಗಳ ನೌಕರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿ, ಸಂಘವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಎಂ.ಎನ್‌.ರಾಜೇಂದ್ರ ಕುಮಾರ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು