ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮ ನಿರ್ಭರತೆಯಿಂದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿ : ಶಾಸಕ ಡಿ. ವೇದವ್ಯಾಸ ಕಾಮತ್

Last Updated 9 ಸೆಪ್ಟೆಂಬರ್ 2020, 2:31 IST
ಅಕ್ಷರ ಗಾತ್ರ

ಮಂಗಳೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ 30 ದಿನಗಳ ‘ಫ್ಯಾಶನ್ ಮತ್ತು ಡ್ರೆಸ್ ಡಿಸೈನಿಂಗ್’ ಕೌಶಲ ಅಭಿವೃದ್ಧಿ ಕಾರ್ಯಕ್ರಮ ನಗರದ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಸೇವಾ ಕೇಂದ್ರದಲ್ಲಿ ನಡೆಯಿತು.

ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ‘ಆತ್ಮ ನಿರ್ಭರತೆಯಿಂದ ಕಾರ್ಯನಿರ್ವಹಿಸಿ ಆರ್ಥಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬನೆಗೆ ಶ್ರಮಿಸಬೇಕು. ಸರ್ಕಾರದಿಂದ ಸೂಕ್ಷ್ಮ, ಸಣ್ಣ ಹಾಗೂ ಜೀವನೋಪಾಯ ಉದ್ದಿಮೆಗಳಿಗೆ ದೊರೆಯುವ ಧನಸಹಾಯದ ಪ್ರಯೋಜನ ಪಡೆಯಬೇಕು’ ಎಂದು ಸಲಹೆ ನೀಡಿದರು.

ಉದ್ಘಾಟಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಿಬಿರಾರ್ಥಿಗಳು ತಮ್ಮ ಕೌಶಲಗಳನ್ನು ಹೊರಹಾಕುವ ಮೂಲಕ ವೈಯಕ್ತಿಕ ಮತ್ತು ದೇಶದ ಆರ್ಥಿಕ ಅಭಿವೃದ್ಧಿ ಚಟುವಟಿಕೆಗಳನ್ನು ಸಕ್ರಿಯಗೊಳಿಸಬೇಕು. ಇಂತಹ ವಾತಾವರಣ ಸೃಷ್ಟಿಸಲು ಉಚಿತ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆದರ್ಶ ಉದ್ಯಮಿಗಳಾಗಿ ಬೆಳೆಯುವಂತೆ ತಿಳಿಸಿದರು.

ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ ಅಧ್ಯಕ್ಷ ಮೋಹನಾಂಗಯ್ಯ ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಹಾಗೂ ವಲಯಾಧಿಕಾರಿ ರಾಘವೇಂದ್ರ ಎಂ. ಅತಿಥಿಗಳಾಗಿ ಭಾಗವಹಿಸಿದ್ದರು. ಸಿಡಾಕ್‌ನ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಸ್ವಾಗತಿಸಿ, ನಿರೂಪಿಸಿದರು. ಸಿಡಾಕ್‌ ಸಲಹೆಗಾರರಾದ ಪ್ರವಿಷ್ಯ ಮತ್ತು ವಿದ್ಯಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT