ಸೋಮವಾರ, ಜನವರಿ 20, 2020
21 °C

ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ‌ ಸಂದೇಶ; ಪೊಲೀಸ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಮನಿಸುತ್ತಿರುವುದು –ಸಾಂದರ್ಭಿಕ ಚಿತ್ರ

ಮಂಗಳೂರು: ಧಾರ್ಮಿಕ ಭಾವನೆಗಳಿಗೆ‌ ಧಕ್ಕೆ ತರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ‌ ಹರಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ನಗರ ಪೊಲೀಸರು, ನೋಟಿಸ್ ಜಾರಿಗೊಳಿಸಿದ್ದಾರೆ.

ಇಂತಹ ಸಂದೇಶಗಳನ್ನು ಹರಡುತ್ತಿರುವ‌ ಕೆಲ ಮೊಬೈಲ್ ಸಂಖ್ಯೆಗಳ ಮೇಲೆ ನಿಗಾ ಇಡಲಾಗಿದೆ. ಇದೇ ರೀತಿ ಸಂದೇಶ ಕಳುಹಿಸುವುದನ್ನು ಮುಂದುವರಿಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಇದನ್ನೂ ಓದಿ: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಬೆಂಗಳೂರು, ಕಲಬುರ್ಗಿಯಲ್ಲಿ ಪ್ರತಿಭಟನಾಕಾರರ ವಶ

ಹೊರದೇಶದಲ್ಲಿ‌ ಕುಳಿತು‌ ಸಂದೇಶ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ.‌ ಕಾನೂನು, ಸುವ್ಯವಸ್ಥೆಗೆ‌ ಧಕ್ಕೆ ತರುವ‌ ಸಂದೇಶ ಹರಡಿದಲ್ಲಿ‌ ಗ್ರೂಪ್‌ಗಳ ಅಡ್ಮಿನ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಾಮರಸ್ಯಕ್ಕೆ‌ ಧಕ್ಕೆ ತರುವ‌ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಯಾರೇ ಇಂತಹ ಕೃತ್ಯ ಮಾಡಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು‌ ಸ್ಪಷ್ಟಪಡಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು