ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದುಕು ಕಟ್ಟೋಣ ತಂಡದ ಸೇವಾ ಕಾಳಜಿ ಶ್ಲಾಘನೀಯ: ಶಾಸಕ ಹರೀಶ್ ಪೂಂಜ

Published 10 ಡಿಸೆಂಬರ್ 2023, 13:19 IST
Last Updated 10 ಡಿಸೆಂಬರ್ 2023, 13:19 IST
ಅಕ್ಷರ ಗಾತ್ರ

ಉಜಿರೆ: ನೆರೆಹಾನಿ, ಕೋವಿಡ್‌ನಿಂದ ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡದ ಸೇವಾ ಕಾರ್ಯಗಳು ಆದರ್ಶ ಹಾಗೂ ಅನುಕರಣೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬೆಳಾಲು ಗ್ರಾಮದ ಪೆರಿಯಡ್ಕದಲ್ಲಿ ಉಜಿರೆಯ ಬದುಕುಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಾಡಿದ ಶಾಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಾಲೆಗೆ ಶಾಸಕರ ನಿಧಿಯಿಂದ ₹ 10 ಲಕ್ಷ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಕುಮಾರ ಹೆಗ್ಡೆ ಮಾತನಾಡಿ, ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದನೀಯವಾಗಿದೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದರು.

ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾಶ್ರೀನಿವಾಸ ಗೌಡ ಮಾತನಾಡಿದರು.

ಬದುಕು ಕಟ್ಟೋಣ ತಂಡದ ರೂವಾರಿ ಮೋಹನ್ ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕೊರಗಪ್ಪ ನಾಯ್ಕ, ಗ್ರಾಮ ಪಂಚಾಯಿತಿ ಸದಸ್ಯ ಸುರೇಂದ್ರ ಗೌಡ, ಸತೀಶ್ ಗೌಡ ಭಾಗವಹಿಸಿದ್ದರು.

ಶಾಲಾ ಮುಖ್ಯಶಿಕ್ಷಕಿ ವಿಜಯಾ ಸ್ವಾಗತಿಸಿದರು. ಹೇಮಂತ್ ವಂದಿಸಿದರು. ಗಿರೀಶ್, ಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT