ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರ್ಮಿಕ ಸಾಮರಸ್ಯದಿಂದ ಸುಸಂಸ್ಕೃತ ಸಮಾಜ: ಕೆ.ಹರಿಕೃಷ್ಣ

ಬಂಟ್ವಾಳದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ
Published 25 ಆಗಸ್ಟ್ 2024, 14:02 IST
Last Updated 25 ಆಗಸ್ಟ್ 2024, 14:02 IST
ಅಕ್ಷರ ಗಾತ್ರ

ಬಂಟ್ವಾಳ: ದೇಶದಲ್ಲಿ ವಿವಿಧ ಜಾತಿ ಮತ್ತು ಭಾಷೆ ಹಾಗೂ ಧರ್ಮಗಳ ಜನರು ಬಾಲ್ಯದಿಂದಲೇ ಮಕ್ಕಳಿಗೆ ಗುರು ಹಿರಿಯರನ್ನು ಗೌರವಿಸುವುದರ ಜತೆಗೆ ದೇಶಭಕ್ತಿ, ಸಂಸ್ಕಾರ ನೀಡಿದಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಂಥ ಸಂಸ್ಕಾರ ಇಲ್ಲದ ಪರಿಣಾಮ ಬಾಂಗ್ಲಾ ಮೊದಲಾದ ರಾಷ್ಟ್ರಗಳಲ್ಲಿ ಧಾರ್ಮಿಕ ಸಂಘರ್ಷಗಳ ಮೂಲಕ ದೇಶದ ಅವನತಿಯಾಗುತ್ತಿದೆ ಎಂದು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಹೇಳಿದರು.

ಇಲ್ಲಿನ ಬಿಲ್ಲವ ಸಮಾಜ ಸೇವಾ ಸೇವಾ ಸಂಘದ ವತಿಯಿಂದ ಗಾಣದಪಡ್ಪು ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಆರತಿ ದಾಸಪ್ಪ ಪೂಜಾರಿ ಉಪನ್ಯಾಸ ನೀಡಿ, ‘ಮಕ್ಕಳು ಪಠ್ಯದ ಜತೆಗೆ ಆತ್ಮಸ್ಥೈರ್ಯ ಬೆಳೆಸಿಕೊಂಡಾಗ ಮಾತ್ರ ಸಾಧನೆಯ ಮೆಟ್ಟಿಲು ಏರಲು ಸಾಧ್ಯವಿದೆ’ ಎಂದರು.

ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಸಾಧಕರು ಮತ್ತು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜತೆ ಕಾರ್ಯದರ್ಶಿ ರಾಜೇಶ್ ಸುವರ್ಣ ಮಿತ್ತಬೈಲು, ಲೆಕ್ಕಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಭಾಗವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ ಸ್ವಾಗತಿಸಿ, ಕೋಶಾಧಿಕಾರಿ ಆನಂದ ಸಾಲ್ಯಾನ್ ಶಂಭೂರು ವಂದಿಸಿದರು. ಯತೀಶ್ ಪೂಜಾರಿ ಶಂಭೂರು, ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT