ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ ಜನಸಮೃದ್ಧಿ ಸೊಸೈಟಿ ಉದ್ಘಾಟನೆ

Last Updated 12 ಡಿಸೆಂಬರ್ 2018, 14:33 IST
ಅಕ್ಷರ ಗಾತ್ರ

ಮೂಡುಬಿದಿರೆ: ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಜನಸಮೃದ್ಧಿ ಮಲ್ಟಿಪರ್ಪಸ್ ಕೊಆಪರೇಟಿವ್ ಸೊಸೈಟಿ ಇದರ 25ನೇ ಮೂಡುಬಿದಿರೆ ಶಾಖೆಯ ಉದ್ಘಾಟನಾ ಸಮಾರಂಭ ಇಂದು(ಗುರುವಾರ) ಇಲ್ಲಿನ ಪೊನ್ನೆಚಾರಿ ರಸ್ತೆ ಬಳಿಯಿರುವ ರಾಮತೀರ್ಥ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.

ಬೆಳಿಗ್ಗೆ 9ಕ್ಕೆ ಬ್ಯಾಂಕ್ನಲ್ಲಿ ಪೂಜೆ ನಡೆದು ಬಳಿಕ ನಡೆಯುವ ಸಮಾರಂಭದಲ್ಲಿ ಜನಸಮೃದ್ಧಿ ಕೊಆಪರೇಟಿವ್ ಸೊಸೈಟಿಯ ಅಧ್ಯಕ್ಷ ರಾಮು 25ನೇ ಮೂಡುಬಿದಿರೆ ಶಾಖೆಯನ್ನು ಉದ್ಘಾಟಿಸುವರು. ಶಾಸಕ ಉಮಾನಾಥ ಕೋಟ್ಯಾನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಸೊಸೈಟಿಯ ವಿವಿಧ ವಿನೂತನ ಸೇವೆಗಳನ್ನು ಬಿಡುಗಡೆಮಾಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT