ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಜ್ಯ ಘಟಕ ನಿರ್ಮಾಣ ಪರಿಸರಕ್ಕೆ ಪೂರಕ

ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ: ಜಿಲ್ಲಾ ಮಟ್ಟದ ಕಾರ್ಯಾಗಾರ
Last Updated 10 ಜುಲೈ 2021, 4:14 IST
ಅಕ್ಷರ ಗಾತ್ರ

ಬಂಟ್ವಾಳ: ತ್ಯಾಜ್ಯ ಘಟಕ ನಿರ್ಮಾಣ ಪರಿಸರ ಸಂರಕ್ಷಣೆಗೆ ಪೂರಕವಾಗಿದೆ. ಜಿಲ್ಲೆಯಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀಸಲಿಟ್ಟ ಸರ್ಕಾರಿ ಜಮೀನಿನಲ್ಲಿ ಘನ ಮತ್ತು ದ್ರವತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಿಸಬೇಕು ಎಂದು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ರಾಜ್ಯ ಸಮಾಲೋಚಕ ವಿನೋದ್ ಹೇಳಿದರು.

ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯ್ದಗ್ರಾಮ ಪಂಚಾಯಿತಿ ಪಿಡಿಒ ಸಹಿತ ಇತರ ಇಲಾಖೆ ಅಧಿಕಾರಿಗಳು ಮತ್ತು ಸಂಯೋಜಕರಿಗೆ ಗುರುವಾರ ಏರ್ಪಡಿ ಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸರ್ಕಾರದ ಆಶಯದಂತೆ ಸ್ವಚ್ಛ ಭಾರತ ಗ್ರಾಮೀಣ ಮಿಷನ್ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಅನುದಾನ ಜೊತೆಗೆ ಇತರ ಅನುದಾನ ಒಟ್ಟುಗೂಡಿಸಿ ತ್ವರಿತ ಕಾಮಗಾರಿ ಕೈಗೊಳ್ಳುವುದು ಕಾರ್ಯಾಗಾರದ ಮುಖ್ಯ ಉದ್ದೇಶ ಎಂದರು.

ಉದ್ಯೋಗ ಖಾತರಿ ಯೋಜನೆ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿ ಕಿಶನ್ ಕುಮಾರ್ ರಾವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿದರು. ಪ್ರಮುಖರಾದ ಪವನ್ ಕುಮಾರ್, ಡೊಂಬಯ್ಯ, ಶೈವಿ ಗೋವಿಯಸ್ ಇದ್ದರು.
ಉದ್ಯೋಗ ಖಾತರಿ ಯೋಜನೆ ಸಹಾಯಕ ನಿರ್ದೇಶಕ ಶಿವಾನಂದ ಪೂಜಾರಿ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT